ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಶಕ್ತಿ ಯೋಜನೆ ಕುರಿತ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು.
ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು, ಡಿಸಿಎಂಗೆ ತರಾಟೆಗೆ ತೆಗೆದುಕೊಂಡಿದ್ದು, ಏನಪ್ಪಾ.. ಗ್ಯಾರಂಟಿಯ ಬಗ್ಗೆ ಏನೋ ಹೇಳಿದ್ದೀಯಲ್ಲ ಎಂದು ಪ್ರಶ್ನೆ ಮಾಡಿದರು.
ಇದಕ್ಕೆ ಉತ್ತರಿಸಿದ ಡಿಕೆಶಿ, ನಾನು ಏನನ್ನೂ ಹೇಳಿಲ್ಲ ಎಂದು ಕೈಸನ್ನೆ ಮಾಡಿದರು. ನೀನು ಪೇಪರ್ ನೋಡಿಲ್ಲ, ದಿನನಿತ್ಯ ನಾನು ಪೇಪರ್ ನೋಡುತ್ತೇನೆ. ಪೇಪರ್‌ನಲ್ಲಿ ನೀನೇ ಹೇಳಿದ್ದೀಯಾ ಎಂದು ಬಂದಿದೆ ಎಂದರು.
ಕೂಡಲೇ ಇದಕ್ಕೆ ಮಧ್ಯಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.