Mysore
29
scattered clouds

Social Media

ಭಾನುವಾರ, 09 ಫೆಬ್ರವರಿ 2025
Light
Dark

ಸಿಎಂ, ಡಿಸಿಎಂ ಸ್ಥಾನ ಬದಲಾವಣೆ ಬಗ್ಗೆ ಹೈಕಮಾಂಡ್‌ ನಿರ್ಧಾರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಮತ್ತು ಡಿಸಿಎಂ ಸ್ಥಾನವನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ನಿರ್ಧಾರಿಸುತ್ತದೆ. ಈ ಬಗ್ಗೆ ಯಾವುದೇ ಚರ್ಚೆಗಳು ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಹಾಗೂ ಡಿಸಿಎಂ ಬದಲಾವಣೆ ಕುರಿತು ಹೈಕಮಾಂಡ್‌ ನಿರ್ಣಯ ತೆಗೆದುಕೊಳ್ಳುತ್ತದೆ. ಅಲ್ಲದೇ ರಾಹುಲ್‌ ಗಾಂಧಿ ಹಾಗೂ ನಾನು ಎಐಸಿಸಿ ಅಧ್ಯಕ್ಷನಾಗಿ ತೀರ್ಮಾನಿಸುತ್ತೇವೆ. ಅಲ್ಲದೇ ಯಾವ ಸಂದರ್ಭದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿರುತ್ತದೆ. ಅದನ್ನೇ ನೋಡಿಕೊಂಡು ಹೈಕಮಾಂಡ್‌ನೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿನ ಗೊಂದಲಗಳ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ನಾಯಕರೆಲ್ಲರೂ ಹೇಳಿಕೆಗಳನ್ನೂ ಬಹಿರಂಗವಾಗಿ ನೀಡಬಾರದು. ಎಲ್ಲಾ ಸಚಿವರೂ ಹಾಗೂ ಶಾಸಕರೂ ಪಕ್ಷ ಕೊಟ್ಟಿರುವ ಕೆಲಸವನ್ನು ಮಾತ್ರ ನಿರ್ವಹಿಸಿಕೊಂಡು ಹೋಗಬೇಕು. ಯಾವಾಗ ಏನು ಮಾಡಬೇಕೆಂದನ್ನು ಹೈಕಮಾಂಡ್‌ ನಿರ್ಧಾರಿಸಲಿದೆ. ಹೀಗಾಗೊ ಸುಮ್ಮನೆ ಹೇಳಿಕೆಗಳನ್ನು ನೀಡುವುದರಿಂದ ಏನೂ ಪ್ರಯೋಜನವಾಗುವುದಿಲ್ಲ. ಕೆಲವರು ಹೇಳಿಕೆ ನೀಡಿದಂತೆಲ್ಲಾ ಹೈಕಮಾಂಡ್‌ ನಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Tags: