ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಕುಟುಂಬದ ಹಿರಿಯಣ್ಣ ಇದ್ದಂತೆ, ನಿನ್ನೆ ಭೇಟಿ ಮಾಡಿದ ವೇಳೆ ರಾಜಕೀಯವಾಗಿ ಚರ್ಚೆ ಮಾಡಿಲ್ಲ ಎಂದು ಗೃಹ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.10) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ನಾವು ಆಗಾಗ ಭೇಟಿಯಾಗುತ್ತಿರುತ್ತೇವೆ. ಅವರು ನಮ್ಮ ಕುಟುಂಬದ ಹಿರಿಯಣ್ಣ ಇದ್ದಂತೆ. ಹೀಗಾಗಿ ಅವರನ್ನು ಭೇಟಿ ಮಾಡಿರುವುದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ಇನ್ನು ನಾನು ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿನ್ನೆ ಭೇಟಿ ಮಾಡಿದಾಗ ನಾವು ಯಾವುದೇ ರಾಜಕೀಯ ವಿಚಾರಗಳನ್ನು ಚರ್ಚಿಸಿಲ್ಲ. ಅದನ್ನು ಹೊರತು ಪಡಿಸಿ ಕುಟುಂಬದ ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.





