ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಜಿಲ್ಲೆಯಲ್ಲಿ ಸ್ವಯಂ ಘೋಷಿತ ದೇವಮಾನವ ಎಂದೇ ಹೆಸರಾಗಿದ್ದ ಮಲ್ಲಿಕಾರ್ಜುನ ಮುತ್ಯಾ, ಅಪ್ರಾಪ್ತ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸುವ, ಅವರ ಕತ್ತು ಹಿಸುಕಿ ಹಿಂಸಿಸಿ ವಿಕೃತವಾಗಿ ಆನಂದಪಡುವ ವಿಲಕ್ಷಣ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇದರ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಅಲ್ಲದೇ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ ಠಾಣೆಯಲ್ಲಿ ಪೋಕ್ಸೋ ಕೇಸ್ ಕೂಡ ದಾಖಲಾಗಿದೆ.
ಬಂಧನ ಭೀತಿಯಲ್ಲಿರುವ ಮುತ್ಯಾ, ತಲೆಮರೆಸಿಕೊಂಡಿದ್ದು, ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ್ದಾರೆ. ತಾನು ಎಲ್ಲಿಯೂ ನಾಪತ್ತೆಯಾಗಿಲ್ಲ. ಬೇರೆ ಬೇರೆ ಮಠಗಳಿಗೆ ಭೇಟಿ ನೀಡುತ್ತಿದ್ದೇನೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ದೃಶ್ಯ ತಪ್ಪಾಗಿ ಭಾವಿಸಲಾಗಿದೆ. ತಾನು ಯಾವುದೇ ತಪ್ಪು ಮಾಡಿಲ್ಲ. ಅಸಭ್ಯವಾಗಿ ವರ್ತಿಸುವಂತದ್ದು ಅದರಲ್ಲಿ ಏನೂ ಇಲ್ಲ ಎಂದು ಹೇಳಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…