ರಾಜ್ಯ

ನಾನು, ಮೋದಿ, ಟ್ರಂಪ್‌ ಒಂದಾಗಿ ಚರ್ಚಿಸಿದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹೇಗಾಗುತ್ತದೆ: ಮೆಲೋನಿ

ವಾಷಿಂಗ್ಟನ್‌: ನಾನು, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒಂದಾಗಿ ಚರ್ಚಿಸಿದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹೇಗೆ ಆಗುತ್ತದೆ ಎಂದು ಇಟಲಿ ಪ್ರಧಾನಿ ಜಾಜಿಯಾ ಮೆಲೋನಿ ಅವರು ಎಡಪಂಥೀಯ ನಾಯಕರಿಗೆ ಪ್ರಶ್ನಿಸಿದ್ದಾರೆ.

ವಾಷಿಂಗ್ಟನ್‌ನಲ್ಲಿ ಇಂದು(ಫೆಬ್ರವರಿ.24) ನಡೆದ ಕನ್ಸರ್ವೇಟಿವ್‌ ಪೊಲಿಟಿಕಲ್‌ ಆಕ್ಷನ್‌ ಕಾನ್ಫ್‌ರೆನ್ಸ್‌ನಲ್ಲಿ ವಿಡಿಯೋ ಮೂಲಕ ಮಾತನಾಡಿದ ಅವರು, ನಾನು, ಮೋದಿ ಹಾಗೂ ಟ್ರಂಪ್‌ನಂತಹ ಬಲಪಂಥೀಯ ನಾಯಕರು ಒಂದಾದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎಂದು ಕೂಗೆಬ್ಬಿಸುತ್ತಾರೆ. ಆದರೆ ಅದೇ ಎಡಪಂಥೀಯ ನಾಯಕರು ಇದೇ ರೀತಿ ಮೈತ್ರಿ ಮಾಡಿಕೊಂಡಾಗ ಪ್ರಶಂಸೆ ವ್ಯಕ್ತಪಡಿಸುತ್ತಾರೆ. ಎಡಪಂಥೀಯರು ಟ್ರಂಪ್ ಅವರ ಗೆಲುವಿನಿಂದ ಆತಂಕಕ್ಕೆ ಒಳಪಟ್ಟಿದ್ದಾರೆ. ಅಲ್ಲದೇ ಕನ್ಸರ್ವೇಟಿವ್‌ಗಳು ಗೆಲ್ಲುತ್ತಿರುವುದು ಮಾತ್ರವಲ್ಲ, ಅಂತಾರರಾಷ್ಟ್ರೀಯ ಮಟ್ಟದಲ್ಲೂ ಒಂದಾಗುತ್ತಿರುವುದು ಎಡಪಂಥೀಯರಿಗೆ ವಿಪರೀತ ಹೊಟ್ಟೆಯುರಿ ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ.

ಹಿಂದಿನ ಬ್ರಿಟನ್‌ ಪ್ರಧಾನಿ ಟೋನಿ ಬ್ಲೇರ್‌ ಹಾಗೂ ಬಿಲ್‌ಕ್ಲಿಂಟನ್‌ ಅವರು 90 ದಶಕದಲ್ಲಿ ಅಂತಾರರಾಷ್ಟ್ರೀಯ ಎಡಪಂಥೀಯ ಉದಾರವಾದಿ ನೆಟ್‌ವರ್ಕ್‌ ರಚಿಸಿದಾಗ ಅವರನ್ನು ಮುತ್ಸದ್ದಿಗಳು ಎಂದು ಕರೆದಿದ್ದರು. ಆದರೆ ಇದೀಗ ನಾನು, ಭಾರತದ ಪ್ರಧಾನಿ ನರೇಂದ್ರ ಮೋದಿ, ಟ್ರಂಪ್‌ ಹಾಗೂ ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್‌ ಅವರು ಪರಸ್ಪರ ಚರ್ಚಿಸಿದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎನ್ನುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ನಮಗೆ ಎಡಪಂಥೀಯವರ ದ್ವಿಮುಖ ನೀತಿ ಅಭ್ಯಾಸವಾಗಿದೆ. ಅವರು ನಮ್ಮ ಮೇಲೆ ಎಷ್ಟೇ ಕೆಸರು ಎರಚಿದರೂ ಎಡಪಂಥೀಯ ಸುಳ್ಳುಗಳನ್ನು ಸಾರ್ವಜನಿಕರು ನಂಬದೇ ನಮಗೆ ಮತಗಳನ್ನು ಹಾಕುತ್ತಿದ್ದಾರೆ. ನಾವು ಸ್ವಾತಂತ್ರ್ಯವನು ರಕ್ಷಿಸುತ್ತೇವೆ, ಆದೆ ಹಸಿರು ಎಡಪಂಥಯರು ಹುಚ್ಚುತನದಿಂದ ಜನರನ್ನು ರಕ್ಷಿಸುತ್ತೇವೆ ಎಂದು ನುಡಿಯುತ್ತಾರೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

4 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

4 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

4 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

4 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

4 hours ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

4 hours ago