ರಾಜ್ಯ

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ : ನಂಜೇಗೌಡ ವಿನ್ನರ್‌ ಎಂದ ಸುಪ್ರೀಂ

ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು ವಿಜೇತರಾಗಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಡೆದ ಮರುಮತ ಎಣಿಕೆಯಲ್ಲಿ ಈ ಹಿಂದೆ ವಿಜೇತರಾಗಿದ್ದ ನಂಜೇಗೌಡ ಅವರು 250 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದೆ.

ಸುಪ್ರೀಂ ಕೋರ್ಟ್‌ ಸೂಚನೆಯಂತೆ ಕೆಲ ತಿಂಗಳ ಹಿಂದೆ ಮರು ಎಣಿಕೆ ನಡೆಸಿತ್ತು. ನ್ಯಾಯಾಲಯ ಫಲಿತಾಂಶ ಬಹಿರಂಗ ಪಡಿಸಿದೆ. ಒಟ್ಟು 250 ಮತಗಳ ಅಂತರದಲ್ಲಿ ಕೆ ವೈ ನಂಜೇಗೌಡ ಗೆಲುವು ಸಾಧಿಸಿದ್ದಾರೆ. ಇನ್ನು 2023 ರಲ್ಲಿ ಮತ ಎಣಿಕೆಯಾಗಿದ್ದಾಗ 248 ಮತಗಳಿಂದ ಜಯಗಳಿದ್ದರು. ಈ ಬಾರಿ 2 ಮತ ಹೆಚ್ಚು ಲಭಿಸಿವೆ.

2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕಾಂಗ್ರೆಸ್ ಸದಸ್ಯ ಕೆ ವೈ ನಂಜೇಗೌಡ ಅವರ ಆಯ್ಕೆಯಾಗಿದ್ದರು. ಮತ ಎಣಿಕೆಯಲ್ಲಿ ಅಕ್ರಮ ನಡೆಸಿದ್ದು, ಮರು ಮತ ಎಣಿಕೆ ನಡೆಸಬೇಕು ಎಂದು ಬಿಜೆಪಿ ಅಭ್ಯರ್ಥಿ ಕೆಎಸ್‌ ಮಂಜುನಾಥ್ ಅವರು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ವೇಳೆ ಹೈಕೋರ್ಟ್‌ ಕೆವೈ ನಂಜೇಗೌಡ ಅವರ ಸ್ಥಾನವನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು. ಇದನ್ನ ಪ್ರಶ್ನೆ ಮಾಡಿ ಶಾಸಕರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ ಮರು ಎಣಿಕೆ ಮಾಡಿ ಫಲಿತಾಂಶ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.

ತಮ್ಮ ಶಾಸಕ ಸ್ಥಾನವನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜೋಯ್​​ಮಲ್ಯ ಬಾಗ್ಚಿ ಅವರಿದ್ದ ಪೀಠ, ನಂಜೇಗೌಡ ಅವರ ಆಯ್ಕೆಯನ್ನು ಎತ್ತಿ ಹಿಡಿದಿದೆ. ಈ ಮೂಲಕ ಕಾಂಗ್ರೆಸ್ ಶಾಸಕರ ಆಯ್ಕೆಯನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್‌ 2025ರ ಸೆಪ್ಟಂಬರ್​ನಲ್ಲಿ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು.

ವಿಚಾರಣೆ ವೇಳೆ ಎಲ್ಲರ ಸಮ್ಮುಖದಲ್ಲಿ ಪೀಠವು ಮುಚ್ಚಿದ ಲಕೋಟೆಯನ್ನು ನ್ನು ತೆರೆದಿದ್ದು, ಮರು ಎಣಿಕೆಯಲ್ಲೂ ನಂಜೇಗೌಡರು ಹೆಚ್ಚು ಮತ ಪಡೆದಿದ್ದಾರೆ. ನಂಜೇಗೌಡರು 50,957 ಮತಗಳನ್ನು ಗಳಿಸಿದರೆ ಮಂಜುನಾಥ ಗೌಡರು 50,707 ಮತಗಳನ್ನು ಪಡೆದಿರುವುದನ್ನು ಪೀಠ ಗಮನಿಸಿತು. ಹೈಕೋರ್ಟ್ ಹೊರಡಿಸಿದ ಮರು ಮತ ಎಣಿಕೆ ನಿರ್ದೇಶನದ ಬಳಿಕವೂ ಮಾಲೂರಿನ ಅಭ್ಯರ್ಥಿಯ ಆಯ್ಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪೀಠ ತಿಳಿಸಿತು. ಹಿರಿಯ ವಕೀಲ ಸಿಂಘ್ವಿ ಅವರು ಅರ್ಜಿದಾರರ ಪರವಾಗಿ ಪೀಠದ ಮುಂದೆ ಹಾಜರಾಗಿದ್ದರು.

ಪ್ರಕರಣದ ಹಿನ್ನೆಲೆ
2023ರ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕೆ.ವೈ. ನಂಜೇಗೌಡ ಗೆಲುವು ಸಾಧಿಸಿದ್ದರು. ಫಲಿತಾಂಶದಲ್ಲಿ ಗೋಲ್​ ಮಾಲ್​ ನಡೆದಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥ್ ಆರೋಪಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

5 mins ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

11 mins ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

16 mins ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

21 mins ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

25 mins ago