Mysore
23
clear sky

Social Media

ಗುರುವಾರ, 22 ಜನವರಿ 2026
Light
Dark

ಮಾಲೂರು ಕ್ಷೇತ್ರದ ಮರು ಮತ ಎಣಿಕೆ: ಕೇಂದ್ರದ ಸುತ್ತ ನಿಷೇಧಾಜ್ಞೆ

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕೋಲಾರ ನಗರದ ತೋಟಗಾರಿಕಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಎಣಿಕೆ ಕೇಂದ್ರದ ಸುತ್ತ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್‌ ಹಾಗೂ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ನಿಷೇಧಿಸಲಾಗಿದ್ದು, ಮಾಧ್ಯಮದವರಿಗೂ ನಿಷೇಧ ಹೇರಲಾಗಿದೆ.

ಇದನ್ನು ಓದಿ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್‌ ಆದೇಶ

ಕಳೆದ ವಿಧಾನಸಭೆ ಚುನಾವಣೆಯಲ್ಲಿ 248 ಮತಗಳ ಅಂತರದಿಂದ ಕಾಂಗ್ರೆಸ್‌ನ ನಂಜೇಗೌಡ ಜಯಶಾಲಿಯಾಗಿದ್ದರು. ಮತ ಎಣಿಕೆಯಲ್ಲಿ ತೀವ್ರ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಕೋರ್ಟ್‌ ಮೊರೆ ಹೋಗಿದ್ದರು. ಸುಪ್ರೀಂಕೋರ್ಟ್‌ ಆದೇಶದ ಮೇರೆಗೆ ಮರು ಮತ ಎಣಿಕೆ ನಡೆಯುತ್ತಿದ್ದು, ವಿಜಯಮಾಲೆ ಯಾರಿಗೆ ಒಲಿಯಲಿದೆ ಎಂಬುದನ್ನು ಕಾದುನೋಡಬೇಕಿದೆ.

 

Tags:
error: Content is protected !!