ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕೋಲಾರ ನಗರದ ತೋಟಗಾರಿಕಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಎಣಿಕೆ ಕೇಂದ್ರದ ಸುತ್ತ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದ್ದು, ಮಾಧ್ಯಮದವರಿಗೂ ನಿಷೇಧ ಹೇರಲಾಗಿದೆ.
ಇದನ್ನು ಓದಿ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ಆದೇಶ
ಕಳೆದ ವಿಧಾನಸಭೆ ಚುನಾವಣೆಯಲ್ಲಿ 248 ಮತಗಳ ಅಂತರದಿಂದ ಕಾಂಗ್ರೆಸ್‌ನ ನಂಜೇಗೌಡ ಜಯಶಾಲಿಯಾಗಿದ್ದರು. ಮತ ಎಣಿಕೆಯಲ್ಲಿ ತೀವ್ರ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಮರು ಮತ ಎಣಿಕೆ ನಡೆಯುತ್ತಿದ್ದು, ವಿಜಯಮಾಲೆ ಯಾರಿಗೆ ಒಲಿಯಲಿದೆ ಎಂಬುದನ್ನು ಕಾದುನೋಡಬೇಕಿದೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…