ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಪುರ ಗ್ರಾಮದಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಾನಗಲ್ ಸಮೀಪದ ತಿರುವಳ್ಳಿ ಮೂಲದ ಯಲ್ಲಪ್ಪ ಎಂಬುವವರೇ ಮೃತ ದುರ್ದೈವಿ. ಯಲ್ಲಪ್ಪ ಅವರು ನಾಗೇಶ್ ಗೌಡ ಎಂಬುವವರ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಸ್ಥಳದಲ್ಲೇ ಅವರು ಸಾವಿಗೀಡಾಗಿದ್ದಾರೆ.
ಯಲ್ಲಪ್ಪ ಅವರು ಕೂಲಿ ಕೆಲಸ ಹಾಗೂ ಗಾರೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವರ ಮೃತದೇಹವನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…