Mysore
28
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು 

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಕೆಂಪನಹಳ್ಳಿ ಗ್ರಾಮದ ನಿವಾಸಿ ರೇವಣ್ಣ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ರಾಮನಗರ ತಾಲ್ಲೂಕಿನ ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಈ ದುರಂತ ಸಂಭವಿಸಿದೆ. ದೇವರ ದರ್ಶನಕ್ಕೆಂದು ಹೋಗುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!