ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್ ಅಳವಡಿಕೆ ಮಾಡಿ ತಮ್ಮ ಫಾರ್ಮ್ ಹೌಸ್‌ಗಳಿಗೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕುಡಿಯುವ ನೀರಿನ ಸಮಸ್ಯೆ ನಡುವೆ ಅಕ್ರಮ ಮೋಟಾರ್ ಅಳವಡಿಸಿ ಕೆಆರ್‌ಎಸ್ ಡ್ಯಾಂನಿಂದ ಫಾರ್ಮ್ಹೌಸ್ಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಸಂಬಂಧ ಮಾಹಿತಿ ನೀಡಿದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಈ
ಕೆಆರ್‌ಎಸ್ ಡ್ಯಾಂನ ಹಿನ್ನೀರಿಗೆ ಹೊಂದಿಕೊಂಡು ಫಾರ್ಮ್ ಹೌಸ್ ಇದೆ. ಈ ಫಾರ್ಮ್ಹೌಸ್ಗೆ ಅಕ್ರಮವಾಗಿ ಮೋಟಾರ್ ಅಳವಡಿಕೆ ಮಾಡಿ ಸುಮಾರು 200 ಮೀ. ಪೈಪ್ ಅಳವಡಿಸಿಕೊಂಡು ಜಲಾಯಶಯದ ನೀರಿಗೆ ಕನ್ನ ಹಾಕಿ, ಅಕ್ರಮವಾಗಿ ಫಾರ್ಮ್ಹೌಸ್ಗೆ ನೀರು ಪೂರೈಕೆ ಮಾಡುತ್ತಿರುವ ಬಗ್ಗೆ ಸಾರ್ವಜನಿರು ಆಕ್ರೋಶ ಹೊರಹಾಕಿದ್ದಾರೆ.
ಬಗ್ಗೆ ಟಿವಿ 9 ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಇ ಸುರೇಶ್ ಬಾಬು, ಎಇಇ ಕಿಶೋರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯುತ್ ಕಡಿತಗೊಳಿಸಿ, ಕೆಆರ್‌ಎಸ್ ಹಿನ್ನೀರಿಗೆ ಅಳವಡಿಸಿದ್ದ ಮೋಟಾರ್ಗಳನ್ನು ತೆರವು ಮಾಡಿದ್ದಾರೆ.
ಮಂಡ್ಯ: ಸಕ್ಕರೆ ನಗರಿಯಲ್ಲಿ ಶುಕ್ರವಾರ ಆಕ್ಷರಶಃ ದೊಡ್ಡ ಜಾತ್ರೆಯ ಸೊಬಗು ಮನೆ ಮಾಡಿತ್ತು. ಎಲ್ಲಿ ನೋಡಿದರಲ್ಲಿ ಜನವೋ ಜನ; ಅದು…
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…