ಮಂಡ್ಯ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥರಾದಂತಹ ಘಟನೆ ಜಿಲ್ಲೆ ಮದ್ದೂರು ತಾಲ್ಲೂಕಿನ ಅಂಬರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
19 ವಿದ್ಯಾರ್ಥಿನಿಯರು, 10 ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಿಂದ ಮಕ್ಕಳು ಅಸ್ವಸ್ಥಗೊಂಡಿದ್ದರು. ಅಸ್ವಸ್ಥ 29 ವಿದ್ಯಾರ್ಥಿಗಳಿಗೆ ಮಿಮ್ಸ್ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ಘಟಕದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.