ಬೆಂಗಳೂರು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲೆಗೆ ಭೇಟಿ ನೀಡಿದ್ದರು ಪರಿಣಾಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹುಡುಕಿಕೊಂಡು ಪುಸ್ತಕವನ್ನು ಬಂದಿದೆ .
ಹೌದು ಬೊಮ್ಮಯಿ ಅವರಿಗೆ ಅವರಿಗೆ ವಕೀಲರೊಬ್ಬರು ಭಾರತ ಸಂವಿಧಾನ ಪುಸ್ತಕವನ್ನು ಆನ್ಲೈನ್ ಮೂಲಕ ಆರ್ಡರ್ ಮಾಡಿ ಕಳಿಸಿಕೊಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ವಕೀಲರಾದ ಭೀಮನಗೌಡ ಪರಗೊಂಡ ಅವರು ಆನ್ಲೈನ್ ಮೂಲಕ ಸಂವಿಧಾನ ಪುಸ್ತಕವನ್ನು ಆರ್ಡರ್ ಮಾಡಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ವಿಧಾನಸೌಧ ವಿಳಾಸಕ್ಕೆ ಕಳುಹಿಸಿದ್ದಾರೆ.
ಸಂವಿಧಾನ ಪುಸ್ತಕವನ್ನು ಕಳಿಸುವುದರ ಜೊತೆಗೆ ವಕೀಲ ಭೀಮನಗೌಡ ಪರಗೊಂಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾರತದ ಸಂವಿಧಾನದ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾರೆ. ಅವರು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಬೇಕು ಅದರ ಬದಲಾಗಿ ಅವರು ಜಾತಿ, ಧರ್ಮ, ಸಂಘಟನೆಗಳಂತೆ ಕೆಲಸ ಮಾಡುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಯವರು ಸಂವಿಧಾನ ಆಶಯಗಳನ್ನು ಮರೆತಿರುವಂತೆ ಕಾಣುತ್ತಿದೆ. ಹೀಗಾಗಿ ನಾನು ಅವರಿಗೆ ಭಾರತದ ಸಂವಿಧಾನ ನೆನಪಿಸಲು ಆನ್ಲೈನ್ ಮೂಲಕ ಆರ್ಡರ್ ಮಾಡಿ ಪುಸ್ತಕವನ್ನು ಕಳಿಸಿದ್ದೇನೆ. ಮುಂದಾದರು ಸಂವಿಧಾನದ ಆಶಯಗಳಂತೆ ನಡೆದುಕೊಳ್ಳಲಿ ಎಂದಿದ್ದಾರೆ.
ಮಂಗಳೂರಿನ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಬಳಿಕ ಸಿಎಂ ಬಸವರಾಜ ಬೊಮ್ಮಾಯಿಯವರು ಅವರ ಮನೆಗೆ ಭೇಟಿ ನೀಡಿದ್ದರು ಅಲ್ಲದೆ ಸರ್ಕಾರದಿಂದ 25 ಲಕ್ಷ ಹಾಗೂ ಬಿಜೆಪಿ ಪಕ್ಷದ ವತಿಯಿಂದ 25 ಲಕ್ಷ ನೀಡಿದರು. ಆದರೆ ಅವರು ಇತರ ಪ್ರಕರಣಗಳಲ್ಲಿ ಭೇಟಿ ನೀಡಿ ಸಾಂತ್ವನ ಹೇಳಲಿಲ್ಲ. ಜಾತಿ ಧರ್ಮಗಳ ಹೆಸರಿನಲ್ಲಿ ಅವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ. ನಮ್ಮ ದೇಶದಲ್ಲಿ ಇರುವುದು ಪ್ರಜಾಪ್ರಭುತ್ವ ರಾಜಪ್ರಭುತ್ವವಲ್ಲ, ಪ್ರಜಾಪ್ರಭುತ್ವಕ್ಕೆ ಸಂವಿಧಾನವೇ ಬುನಾದಿಯಾಗಿದೆ ಇದರಂತೆ ಬಸವರಾಜ ಬೊಮ್ಮಾಯಿ ಅವರು ನಡೆದುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.