ಮಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಿದೆ. ಅದರಲ್ಲೂ ಕರಾವಳಿ ಭಾಗದಲ್ಲಂತೂ ಮಳೆಯ ತೀವ್ರತೆ ಹೆಚ್ಚಿದೆ. ಆಗಾಗಿ ಸಾವು-ನೋವುಗಳು ಸಂಭವಿಸುತ್ತಿವೆ.
ನಿನ್ನೆ ಬಿದ್ದ ಜೋರು ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದರು. ಬಳಿಕ ಇಂದು ಬೆಳಿಗ್ಗೆ ಮಳೆಗೆ ಧರೆಗುರಿಳಿದ ವಿದ್ಯುತ್ ಸ್ಪರ್ಶಿಸಿ ಆಟೋ ಚಾಲಕರಿಬ್ಬರು ಸಾವನ್ನಪ್ಪಿದ್ದರು. ಇದೀಗ ಮನೆಯ ಬಳಿಯ ವಿದ್ಯುತ್ ಕಂಬದಿಂದ ವಿದ್ಯುತ್ ಹರಿದು ಯುವತಿ ಮೃತಪಟ್ಟಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಮಳೆಯ ಅವಾಂತರಕ್ಕೆ 2 ದಿನಕ್ಕೆ 7 ಜನರು ದುರ್ಮರಣ ಹೊಂದಿದ್ದಾರೆ.
ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ(20) ಮೃತ ಯುವತಿ. ಆರ್ಡರ್ ಮಾಡಿದ್ದ ಮಾರ್ಸೆಲ್ ತೆಗೆದುಕೊಳ್ಳಲು ಮನೆಯಿಂದ ಹೊರಬಂದ ಯುವತಿ ಮಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿದನ್ನು ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.