ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಅವರು ಸುಮಾರು ನಾಲ್ಕು ದಶಕಗಳ ಕಾಲ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ತಮ್ಮದೇ ಆದ ಕೊಡುಗೆ ನೀಡಿದ್ದರು. ಇವರ ಅಗಲಿಕೆಗೆ ಪತ್ರಿಕಾ ರಂಗ ಕಂಬನಿ ಮಿಡಿದಿದೆ.
ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಉದಯವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದ ಇವರು ಮುಖ್ಯ ವರದಿಗಾರರಾಗಿ, ಬ್ಯೂರೋ ಚೀಫ್, ಸಹಾಯಕ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಸುಮಾರು ನಾಲ್ಕು ದಶಕಗಳ ಕಾಲ ಪತ್ರಕಾ ರಂಗದಲ್ಲಿ ಸೇವೆ ಸಲ್ಲಿಸಿದ್ದ ಇವರು ಎರಡು ವರ್ಷಗಳ ಹಿಂದೆಯಷ್ಟೇ ನಿವೃತ್ತಿಗೊಂಡಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…