ಮಂಗಳೂರು : ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಸುತ್ತಿದ್ದ ಸರಕು ಹಡಕು ಬೃಹತ್ ಅಲೆಗೆ ಸಿಲುಕಿ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಅದೃಷ್ಟವಶಾತ್ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಕೋಸ್ಟ್‌ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.
ಎಂಎಸ್‌ವಿ ಸಲಾಯತ್ ಎಂಬ ಹಡಗು ಮೇ 12 ರಂದು ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣ ಬೆಳಿಸಿತ್ತು. ಮೇ 14 ರ ಬೆಳಿಗ್ಗೆ 5;30 ರ ವೇಳೆಗೆ ಬಡಿದ ಬೃಹತ್ ಅಲೆಯೊಂದಕ್ಕೆ ಸಿಲುಕಿ ಮಂಗಳೂರಿನ ನೈರುತ್ಯಕ್ಕೆ 60 ನಾಟಿಕಲ್ ಮೈಲು ದೂರದಲ್ಲಿ ಹಡಗು ಮುಳುಗಡೆಯಾಗಿದೆ. ಆದರೆ, ನಿಖರ ಕಾರಣ ತಿಳಿದು ಬಂದಿಲ್ಲ.
ಮುಳುಗುತ್ತದ್ದ ಹಡಗಿನಲ್ಲಿದ್ದ ಸಿಬ್ಬಂದಿ ಸಣ್ಣ ಡಿಂಗಿ ದೋಣಿಯನ್ನು ಆಶ್ರಯಿಸಿ ಬದುಕುಳಿದಿದ್ದಾರೆ. ಈ ವೇಳೆ ಇದನ್ನು ಗಮನಿಸಿದ ಗಸ್ತು ತಿರುಗುತ್ತಿದ್ದ ಐಸಿಜಿ ಹಡಗು ವಿಕ್ರಮ್ ಡಿಂಗಿ ದೋಣಿಯಲ್ಲಿದ್ದ ಸಿಬ್ಬಂದಿಗಳನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿ, ಗುರುವಾರ ನವ ಮಂಗಳೂರು ಬಂದರಿಗೆ ಕರೆತಂದಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…