ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತುಳು ಸಾರಸ್ವತ ಲೋಕದ ಹಿರಿಯ ವಿದ್ವಾಂಸ, ಸಾಹಿತಿ ಡಾ. ವಾಮನ ನಂದಾವರ (81) ಶನಿವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಮೂಲತಃ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ತುಳು ಜಾನಪದ ವಿದ್ವಾಂಸರಾಗಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜೊತೆಗೆ ತಮ್ಮ ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು ಪ್ರೋತ್ಸಾಹಿಸಿ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದರು.
ಬಂಟ್ವಾಳ ತಾಲ್ಲೂಕಿನ ನಂದಾವರದ ಬಾಬು ಬಾಳೆಪುಣಿ, ಪೂವಮ್ಮರವರ ಪುತ್ರನಾಗಿ 1944ರ ನ.15ರಂದು ಜನಿಸಿದರು. ಇವರು ತಮ್ಮ ‘ಕೋಟಿ ಚೆನ್ನಯ ಜಾನಪದೀಯ ಅಧ್ಯಯನ’ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದಿದ್ದರು.
ಅಧ್ಯಾಪಕರಾಗಿ, ಉಪನ್ಯಸಕರಾಗಿ, ಪ್ರಾಂಶುಪಾಲರಾಗಿ ಹೀಗೆ ಹಲವಾರು ವೃತ್ತಿಪರ ಹುದ್ದೆಗಳಲ್ಲಿ ಡಾ. ವಾಮನ ಸೇವೆ ಸಲ್ಲಿಸಿದ್ದು, ವಿಶ್ವ ತುಳು ಸಮ್ಮೇಳನದ ಸಂದರ್ಭದಲ್ಲಿಯೂ ದೊಡ್ಡಮಟ್ಟದ ಸೇವೆ ಸಲ್ಲಿಸಿದ್ದರು.
ಮಧ್ಯಾಹ್ನ 2 ಗಂಟೆಗೆ ಉರ್ವಸ್ಟೋರ್‌ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್ ನಿಧನರಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ…
ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ…
ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ…
ನವದೆಹಲಿ: ನೆರೆಯ ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…
ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು…
ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ…