Mysore
28
broken clouds

Social Media

ಸೋಮವಾರ, 15 ಜೂನ್ 2026
Light
Dark

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು, 10 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಗಾಯಗೊಂಡಿದ್ದರು. ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯವು, ಆರೋಪಿ ವಿರುದ್ಧದ ಸಾಕ್ಷ್ಯಗಳನ್ನು ಪುರಸ್ಕರಿಸಿದೆ. ಶಾರಿಕ್ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ಪ್ರಕಟಿಸಲಾಗಿದೆ,. ಐಪಿಸಿ ಸೆಕ್ಷನ್ 121ಎ, ಐಪಿಸಿ ಸೆಕ್ಷನ್ 122, ಐಪಿಸಿ ಸೆಕ್ಷನ್ 326, ಯುಎಪಿಎ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಲಾಗಿದೆ.

 

Tags:
error: Content is protected !!