ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು, 10 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಗಾಯಗೊಂಡಿದ್ದರು. ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲಾಗಿತ್ತು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯವು, ಆರೋಪಿ ವಿರುದ್ಧದ ಸಾಕ್ಷ್ಯಗಳನ್ನು ಪುರಸ್ಕರಿಸಿದೆ. ಶಾರಿಕ್ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ಪ್ರಕಟಿಸಲಾಗಿದೆ,. ಐಪಿಸಿ ಸೆಕ್ಷನ್ 121ಎ, ಐಪಿಸಿ ಸೆಕ್ಷನ್ 122, ಐಪಿಸಿ ಸೆಕ್ಷನ್ 326, ಯುಎಪಿಎ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…