Mysore
27
broken clouds

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

ಮಂಗಳೂರು: ದಪ್ಪಗಿದ್ದೇನೆಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು : ನೋಡಲು ದಪ್ಪವಾಗಿರುವೆ ಎಂದು ಸ್ನೇಹಿತರು ಅಪಹಾಸ್ಯ ಮಾಡುತ್ತಿದ್ದಾರೆಂದು ಮನನೊಂದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ತಮ್ಮ ಹಾಸ್ಟೆಲ್‌ ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮೃತ ವಿದ್ಯಾರ್ಥೀನಿ ಪ್ರಕೃತಿ ಶೆಟ್ಟಿ (20 ವರ್ಷ) ಆಗಿದ್ದು, ಈಕೆ ಮಂಗಳೂರಿನ ಎ.ಜೆ. ಮೆಡಿಕಲ್‌ ಕಾಲೇಜು ವಿದ್ಯಾರ್ಥಿನಿಯಾಗಿದ್ದಾಳೆ. ಕಾಲೇಜಿನ ಸಹಪಾಠಿಗಳು ಹಾಗೂ ಸ್ನೇಹಿತರು ದಪ್ಪ ಇರುವ ಬಗ್ಗೆ ಅಪಹಾಸ್ಯ ಮಾಡುತ್ತಿದ್ದು, ಇದರಿಂದ ಹತಾಶಳಾದ ಯುವತಿ ಮನನೊಂದು, ಸರಿ ಸುಮಾರು ಬೆಳಗಿನ ಜಾವ 3 ಗಂಟೆ ವೇಳೆಯಲ್ಲಿ ಹಾಸ್ಟೆಲ್‌ ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನಾ ಡೆತ್‌ ನೋಟ್‌ ಬರೆದಿದ್ದು, ಅದರಲ್ಲಿ ತಾನು ದಪ್ಪವಾಗಿರುವುದಕ್ಕೆ ಜೀವನದಲ್ಲಿ ಹತಾಶೆಗೊಂಡಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‌ನೋಟ್‌ ಬರೆದಿಟ್ಟು ಸಾವಿಗೆ ಶರಣಾಗಿದ್ದಾಳೆ.

ಈ ಸಂಬಂಧ ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ