ಬೆಂಗಳೂರು : ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಿದ್ದು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ.ಗಳಂತೆ ಒಟ್ಟು 4 ರೂ ವ್ಯತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ದತೆ ನಡೆಸಿವೆ.
ಇಂದು ರಾಜ್ಯ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ವಿಡಿಯೋ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವರಾ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾವು ಬೆಳೆಗಾರರ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು.
2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ ಮಾವಿಗೆ PDPS ಯೋಜನೆಯ ಅನುಷ್ಠಾನಕ್ಕೆ ಸಚಿವ ಚಲುವರಾಯಸ್ವಾಮಿ ಅವರು ಮಾಡಿದ ಮನವಿಗೆ ಕೇಂದ್ರ ಕೃಷಿ ಸಚಿವರೂ ಸಹ ಸಮ್ಮತಿ ನೀಡಿದರು.
2.5 ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೋಮವಾರ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ಇದೆ.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ,ಕೃಷಿ , ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಮಾವು ರಾಜ್ಯದ ಪ್ರಮುಖ ಬೆಳೆ: 2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಈ ಬಾರಿ ಅಂದಾಜು 08 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ.
ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ.
ಕರ್ನಾಟಕದಲ್ಲಿ, ಮಾವಿನ ಕೊಯ್ಲು ಮೇ ನಿಂದ ಜುಲೈ ವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ, ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳನ್ನು ಗಮನಿಸಲಾಗಿದೆ.
ಮೇ 2025 ರಲ್ಲಿ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಹಣ್ಣಿನ ಮಾದರಿ ಬೆಲೆಗಳು ಕ್ವಿಂಟಾಲ್‌ಗೆ ರೂ.1,200 ರಿಂದ ರೂ.2,500 ರವರೆಗೆ ಇತ್ತು. ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ತೋತಾಪುರಿ ವರಿಟೆಯ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳು ಪ್ರತಿ ಕ್ವಿಂಟಾಲ್‌ಗೆ 450-550 ರೂಗೆ ಕುಸಿದಿದೆ. ಕರ್ನಾಟಕ ಕೃಷಿ ಬೆಲೆ ಆಯೋಗವು ಮಾವಿನ A1 + FL ಕೃಷಿ ವೆಚ್ಚವನ್ನು ಕ್ವಿಂಟಲ್‌ಗೆ 3,460 ರೂ. ಮತ್ತು C-3 ವೆಚ್ಚಕ್ಕೆ 5,466 ರೂ. ಎಂದು ಶಿಫಾರಸು ಮಾಡಿದೆ.
ಈ ನಿಟ್ಟಿನಲ್ಲಿ 11.06.2025 ರಂದು ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು ಮತ್ತು 13.06.2025 ರಂದು ಸ್ಪಷ್ಟೀಕರಣಗಳಿಗೆ ಉತ್ತರವನ್ನು ನೀಡಲಾಯಿತು. ತೋಟಗಾರಿಕೆ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಮಾವು ಅಭಿವೃದ್ಧಿ ಮಂಡಳಿಯನ್ನು PDPS ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸಂಸ್ಥೆಯಾಗಿ ಗೊತ್ತುಪಡಿಸಲಾಗಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…