ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅವರಿಗೆ ತೀವ್ರ ಆರೋಗ್ಯ ಸಮಸ್ಯೆ ಕಂಡು ಬಂದ ಹಿನ್ನಲೆ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇವರಿಗೆ ಡಾ. ಸತ್ಯನಾರಾಯಣ ಹಾಗೂ ಡಾ. ಸುನೀಲ್ ಕಾಂತರ ಅವರ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ. ಇವರ ಆರೋಗ್ಯದ ಬಗ್ಗೆ ಸದ್ಯ ಬುಲೆಟಿನ್ ಒಂದು ಹೊರಬಂದಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಹಾಗೆಯೇ ಅವರಿಗೆ ಐಸಿಯು ನಲ್ಲೇ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.





