ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್ ಸಿಂಗ ಅವರ ಸರ್ಕಾರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಮನರೇಗಾ ಹೆಸರನ್ನು ತೆಗೆದು ಹಾಕಿ ಈ ಯೋಜನೆಗೆ ಹೊಸ ರೂಪ ಕೊಟ್ಟಿದೆ. ಇದರಲ್ಲಿ ಶೇಕಡಾ.60ರಷ್ಟು ಕೇಂದ್ರ ಹಾಗೂ ಶೇಕಡಾ.40ರಷ್ಟು ನಾವು ಕೊಡಬೇಕಂತೆ. ಇದರ ಬಗ್ಗೆ ಪ್ರತ್ಯೇಕವಾಗಿ ಚರ್ಚೆ ಮಾಡುವ ಸಲುವಾಗಿ ನಾವು ಅಧಿವೇಶನ ಕರೆದಿದ್ದೇವೆ ಎಂದು ಹೇಳಿದರು.
ಮನರೇಗಾ ಮರು ಜಾರಿ ಮಾಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ. ನಮ್ಮನ್ನು ಜೈಲಿಗೆ ಹಾಕಿದರೂ ನಾವು ಹೆದರಲ್ಲ. ಗಾಂಧೀಜಿ ಅವರ ಹೆಸರು ಶಾಶ್ವತವಾಗಿ ಉಳಿಯಬೇಕು. ಮನರೇಗಾ ಮರು ಜಾರಿಗಾಗಿ ನಾವು ಹೋರಾಟ ಮುಂದುವರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.





