ರಾಜ್ಯ

ಮನಮೋಹನ್ ಸಿಂಗ್ ಭಾರತ ಕಂಡ ಪ್ರಾಮಾಣಿಕ ಪ್ರಧಾನಿ: ಸಿಎಂ ಸಿದ್ದರಾಮಯ್ಯ

ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ

ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಪ್ರಶಂಸಿದ್ದನ್ನು ಸ್ಮರಿಸಿದ ಸಿಎಂ

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.

ದೇಶದ ಆರ್ಥಿಕತೆಯಲ್ಲಿ ಮನಮೋಹನ್ ಸಿಂಗ್ ರ ಹೆಜ್ಜೆಗುರುತು
2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ಪ್ರಾಮಾಣಿಕ ಪ್ರಧಾನಮಂತ್ರಿಗಳಲ್ಲಿ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟುಹೋಗಿದ್ದಾರೆ ಎಂದರು.

ಅವರ ನಿಧನದಿಂದ ದೇಶಕ್ಕೆ ದೊಡ್ಡ ನಷ್ಟ
ಅವರ ಬದುಕು, ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ ಹಾಗೂ ಸ್ಪೂರ್ತಿ ನೀಡುತ್ತಿದೆ. ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಶ್ರೀಯುತರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಇಂದು ಅವರು ನಮ್ಮನ್ನು ಅಗಲಿದ್ದು, ಭಾರತಕ್ಕೆ ಆದ ದೊಡ್ಡ ನಷ್ಟ. ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಆಹಾರ ಭದ್ರತೆ ಕಾಯ್ದೆಯಡಿ ಅನ್ನಭಾಗ್ಯ ಯೋಜನೆ
ಮನಮೋಹನ್ ಸಿಂಗ್ ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು. ದೇಶದ ಬಡತನವಿದ್ದಿದ್ದರಿಂದ, ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ನಂತರ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂ. ದರದಲ್ಲಿ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು. ನಂತರದ ದಿನಗಳಲ್ಲಿ ಐದು ಕೆಜಿ ಯಿಂದ ಏಳು ಕೆಜಿಯವರೆಗೆ ಹೆಚ್ಚಿಸಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟನಿವಾರಣೆಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದರು.

ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಪ್ರಶಂಸೆ
ಮನಮೋಹನ್ ಸಿಂಗ್ ರವರೊಂದಿಗಿನ ಮುಖ್ಯಮಂತ್ರಿಗಳ ಒಡನಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಪ್ರಧಾನಿಯಾಗಿದ್ದಾಗ ಭೇಟಿ ಮಾಡಿದ್ದೂ, ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿ, ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿದ್ದರು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

43 mins ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

55 mins ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

2 hours ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

3 hours ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

4 hours ago