ರಾಜ್ಯ

ಮನಮೋಹನ್‌ ಸಿಂಗ್‌ ವಿಧಿವಶ ಹಿನ್ನೆಲೆ: ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರಗಳ ಕಾಲ ರದ್ದು ಮಾಡುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ತಮ್ಮ ಶಾಂತ ಸ್ವಭಾವ, ಆಳವಾದ ಜ್ಞಾನ ಮತ್ತು ಅಪ್ರತಿಮ ದೃಷ್ಟಿಕೋನದಿಂದ ದೇಶದ ಆರ್ಥಿಕತೆ ಹಾಗೂ ಆಡಳಿತವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದ್ದರು. ಈಗ ಅವರು ಇಹಲೋಕ ತ್ಯಜಿಸಿದ್ದಾರೆ. ಇದೇ ಕಾರಣಕ್ಕೆ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 24 ರೂ. ಹಿಡಿದು ಮುಂಬೈಗೆ ಬಂದ ಮುನ್ನಾ ಈಗ ಸೆಲೆಬ್ರೆಟಿ ಫೋಟೋಗ್ರಾಫರ್!

ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…

2 hours ago

ಟಿ-20 ವಿಶ್ವಕಪ್: ಕೌಂಟ್‌ಡೌನ್ ಶುರು

ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್‌ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…

2 hours ago

ಕೊಡಗು ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಸೈಬರ್ ವಂಚನೆ..!

ಕೃಷ್ಣ ಸಿದ್ದಾಪುರ ಪೊಲೀಸರು ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನರು ಹೂಡಿಕೆ ಹಣ ದೋಚುತ್ತಿರುವ ಖದೀಮರು  ಸಿದ್ದಾಪುರ: ಸೈಬರ್ ಅಪರಾಧ ಪ್ರಕರಣಗಳ…

2 hours ago

ಫೆ.6ರಂದು ಮಹದೇಶ್ವರ ದೇವಾಲಯದ ಉದ್ಘಾಟನೆ

ಎಂ.ಯೋಗಾನಂದ್ ಹಿರಿಕ್ಯಾತನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇಗುಲ; ಭಕ್ತರಿಂದ ಅನ್ನಸಂತರ್ಪಣೆ  ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹದೇಶ್ವರ…

2 hours ago

ರೈಲ್ವೆ ಕಂಬಿಗಳಿಗೆ ತಂತಿ ಜಾಲರಿ ಅಳವಡಿಕೆ ಪ್ರಯೋಗ ಯಶಸ್ವಿ

ಮಂಜು ಕೋಟೆ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ; ರೈತರು, ಸಾರ್ವಜನಿಕರು ನಿರಾಳ  ಎಚ್.ಡಿ.ಕೋಟೆ: ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಗಟ್ಟಲು…

2 hours ago

ಕ್ಯಾನ್ಸರ್ ಚಿಂತೆ ಬಿಡಿ, ಚಿಕಿತ್ಸೆ ಬಗ್ಗೆ ಗಮನ ಕೊಡಿ

ಫೋನ್ ಇನ್ ಕಾರ್ಯಕ್ರಮಲ್ಲಿ ಭಾರತ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಿಂದ ಹಲವು ಸಲಹೆ  ಕುಮಾರ್, ಬೆಂಗಳೂರು: ರೊಬೊಟಿಕ್ಸ್ ಶಸಚಿಕಿತ್ಸೆಗೂ, ಸಾಮಾನ್ಯ ಶಸ್ತ್ರಚಿಕಿತ್ಸೆಗೂ ಇರುವ…

2 hours ago