ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ನಾಳೆಯಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ತಯಾರಾಗಿವೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸದನದ ಹೊರಗೆ ಒಂದಾಗಿ ಹೋರಾಟ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಸದನದ ಒಳಗೂ ಸಹ ಸರ್ಕಾರದ ವಿರುದ್ಧ ಒಂದಾಗಲಿವೆ.
ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಬಿಜೆಪಿಯ ಬಸವರಾಜ ಬೊಮ್ಮಾಯಿ, ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್‌ನ ಇ ತುಕಾರಾಂ, ವಿಧಾನ ಪರಿಷತ್ ಸದಸ್ಯ ಬಿಜೆಪಿಯ ಕೋಟಾ ಶ್ರೀನಿವಾಸ್ ಪೂಜಾರಿ ಶಾಸಕ ಮತ್ತು ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಅವರುಗಳಿಲ್ಲದೇ ಮೊದಲ ಅಧಿವೇಶನ ನಡೆಯುತ್ತಿದೆ.
ವಿಧಾನಸಭೆ ಪ್ರತಿಪಕ್ಷದ ಸಾಲಿನಿಂದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ ನಿರ್ಗಮಿಸಿದ್ದಾರೆ. ಆದ್ದರಿಂದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.
ಇನ್ನೂ ಮುಂಗಾರು ಅಧಿವೇಶನ ಕಾವೇರುವ ಎಲ್ಲಾ ಸೂಚನೆ ಸಿಕ್ಕಿದ್ದು, ಪ್ರತಿಪಕ್ಷಗಳ ಕೈಯಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಅನೇಕ ಅಸ್ತ್ರಗಳಿವೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭಾರೀ ಮುಜುಗರ ಅನುಭವಿಸಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷಗಳು ಟಾರ್ಗೆಟ್ ಮಾಡುತ್ತಿವೆ. ವಾಲ್ಮೀಕಿ ಹಗರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಅವರು ಇಡಿಯಿಂದ ಬಂಧನಕ್ಕೆ ಒಳಗಾಗಿದ್ದು, ಕಾಂಗ್ರೆಸ್‌ಗೆ ಸಂಕಷ್ಟ ತಂದಿದೆ.
ಇದಲ್ಲದೇ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಕೆ.ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಲು ಸರ್ಕಾರ ವಿಳಂಬ ಮಾಡುತ್ತಿರುವುದು ಮುಂತಾದ ವಿಚಾರಗಳು ಸದನದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗುವ ನಿರೀಕ್ಷೆಯಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ…
ಶುಭಾ ಖಟಾವಕರ ಮ್ಹೆತ್ರಸ್ ಸಿಗರೇಟು ಮತ್ತು ಜೂಜಿನಷ್ಟೇ ಸಾಮಾಜಿಕ ಜಾಲತಾಣಗಳೂ ಅಪಾಯಕರವೆ? ಅವು ನಿಮ್ಮನ್ನು ಚಟದ ದಾಸರನ್ನಾಗಿಸಬಲ್ಲವೆ? ಇತ್ತೀಚೆಗೆ ಅಮೆರಿಕದ…
ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…