ರಾಜ್ಯ

ನಾಳೆಯಿಂದ ಮುಂಗಾರು ಅಧಿವೇಶನ: ಬಿಜೆಪಿ, ಜೆಡಿಎಸ್‌ ಕೈಯಲ್ಲಿ ಹಲವು ಅಸ್ತ್ರಗಳು

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ನಾಳೆಯಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ತಯಾರಾಗಿವೆ.

ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸದನದ ಹೊರಗೆ ಒಂದಾಗಿ ಹೋರಾಟ ನಡೆಸುತ್ತಿರುವ ಬಿಜೆಪಿ-ಜೆಡಿಎಸ್‌ ಸದನದ ಒಳಗೂ ಸಹ ಸರ್ಕಾರದ ವಿರುದ್ಧ ಒಂದಾಗಲಿವೆ.

ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಬಿಜೆಪಿಯ ಬಸವರಾಜ ಬೊಮ್ಮಾಯಿ, ಜೆಡಿಎಸ್‌ನ ಎಚ್‌.ಡಿ.ಕುಮಾರಸ್ವಾಮಿ, ಕಾಂಗ್ರೆಸ್‌ನ ಇ ತುಕಾರಾಂ, ವಿಧಾನ ಪರಿಷತ್‌ ಸದಸ್ಯ ಬಿಜೆಪಿಯ ಕೋಟಾ ಶ್ರೀನಿವಾಸ್‌ ಪೂಜಾರಿ ಶಾಸಕ ಮತ್ತು ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಅವರುಗಳಿಲ್ಲದೇ ಮೊದಲ ಅಧಿವೇಶನ ನಡೆಯುತ್ತಿದೆ.

ವಿಧಾನಸಭೆ ಪ್ರತಿಪಕ್ಷದ ಸಾಲಿನಿಂದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ ನಿರ್ಗಮಿಸಿದ್ದಾರೆ. ಆದ್ದರಿಂದ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.

ಇನ್ನೂ ಮುಂಗಾರು ಅಧಿವೇಶನ ಕಾವೇರುವ ಎಲ್ಲಾ ಸೂಚನೆ ಸಿಕ್ಕಿದ್ದು, ಪ್ರತಿಪಕ್ಷಗಳ ಕೈಯಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಅನೇಕ ಅಸ್ತ್ರಗಳಿವೆ. ಈಗಾಗಲೇ ಕಾಂಗ್ರೆಸ್‌ ಸರ್ಕಾರ ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭಾರೀ ಮುಜುಗರ ಅನುಭವಿಸಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷಗಳು ಟಾರ್ಗೆಟ್‌ ಮಾಡುತ್ತಿವೆ. ವಾಲ್ಮೀಕಿ ಹಗರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಅವರು ಇಡಿಯಿಂದ ಬಂಧನಕ್ಕೆ ಒಳಗಾಗಿದ್ದು, ಕಾಂಗ್ರೆಸ್‌ಗೆ ಸಂಕಷ್ಟ ತಂದಿದೆ.

ಇದಲ್ಲದೇ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ, ಕೆ.ಸುಧಾಕರ್‌ ರಾವ್‌ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಲು ಸರ್ಕಾರ ವಿಳಂಬ ಮಾಡುತ್ತಿರುವುದು ಮುಂತಾದ ವಿಚಾರಗಳು ಸದನದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗುವ ನಿರೀಕ್ಷೆಯಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago