ರಾಜ್ಯ

ಮರಕುಂಬಿ ದಲಿತರ ಮೇಲಿನ ದೌಜ್ಯನ್ಯ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ದಲಿತರು ಹಾಗೂ ಸವರ್ಣೀಯರ ನಡುವೆ ನಡೆದ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 98 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

98 ಜನರಿಗೆ ತಲಾ 5000 ದಂಡ ಹಾಕಲಾಗಿದೆ. ಉಳಿದ ಮೂವರು ಎಸ್ಸಿ ಎಸ್ಟಿ ಸಮುದಾಯಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಅವರಿಗೆ ಕೊಲೆ ಯತ್ನ, ದೊಂಬಿ ಸೇರಿದಂತೆ ಇನ್ನಿತರ ಸೆಕ್ಷನ್‌ನಲ್ಲಿ ತಲಾ ಐದು ವರ್ಷ ಜೈಲು ಹಾಗೂ ಎರಡು ಸಾವಿರ ದಂಡ ವಿಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಲಯ ನ್ಯಾಯಾಧೀಶ ಸಿ.ಚಂದ್ರಶೇಖರ್‌ ಆದೇಶ ನೀಡಿದ್ದಾರೆ.

2014ರ ಆಗಸ್ಟ್‌ 28 ರಂದು ಸವರ್ಣೀಯರು ಮತ್ತು ದಲಿತ ಸಮುದಾಯದವರ ನಡುವೆ ಸಂಘರ್ಷ ನಡೆದಿತ್ತು. ಈ ಸಂಬಂಧ ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಇದೇ ಅಕ್ಟೋಬರ್‌ 21 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಧೀಶರು 101ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ ಇಂದಿಗೆ ಶಿಕ್ಷೆ ಪ್ರಮಾಣ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದೆ.

2014ರ ಆಗಸ್ಟ್‌ 28 ರಂದು ಗಂಗಾವತಿಯ ಶಿವ ಚಿತ್ರಮಂದಿರದಲ್ಲಿ ಮರಕುಂಬಿ ಗ್ರಾಮದ ದಲಿತ ಸಮುದಾಯದವರು ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್‌ ಪಡೆಯೋ ವಿಚಾರದಲ್ಲಿ ಅದೇ ಗ್ರಾಮದ ಸವರ್ಣೀಯರು ನಡುವೆ ಜಗಳ ನಡೆದಿತ್ತು. ಸಿನಿಮಾ ಮುಗಿದ ಬಳಿಕ ಸಂಜೆ ಗ್ರಾಮದ ಸವರ್ಣೀಯರು ಇದೇ ವಿಚಾರದ ನೆಪದ ಮೇಲೆ ದಲಿತರ ಮನೆಗಳಿಗೆ ನುಗ್ಗಿ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

9 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

10 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

10 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

10 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

10 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

14 hours ago