Mysore
25
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಆರೋಗ್ಯಯುತ ಸಮಾಜ ನಿರ್ಮಾಣಕ್ಕಾಗಿ ಮ್ಯಾರಾಥಾನ್‌: ಜಿ.ಪರಮೇಶ್ವರ್‌

ಬೆಂಗಳೂರು: ಮಾದಕ ದ್ರವ್ಯದಿಂದ ಆಗುತ್ತಿರುವ ದುಷ್ಪರಿಣಾಮ, ಸೈಬರ್‌ ಅಪರಾಧಗಳ ಕುರಿತು ಅರಿವು ಹಾಗೂ ಆರೋಗ್ಯಯುತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯಾದ್ಯಾಂತ ಮ್ಯಾರಾಥಾನ್‌ ಹಮ್ಮಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ರಾಜ್ಯ ಪೊಲೀಸ್‌ ಇಲಾಖೆಯು ಸ್ಟೇಟ್‌ ಬ್ಯಾಂಕ್‌ ಅಫ್‌ ಇಂಡಿಯಾ ಸಹಯೋಗದಲ್ಲಿ ಡ್ರಗ್ಸ್‌ ಮುಕ್ತ ಕರ್ನಾಟಕ ಫಿಟ್ನೆಸ್‌ ಫಾರ್‌ ಆಲ್‌ ಹಾಗೂ ನಮ್ಮ ಪೊಲೀಸ್‌ ಹೆಮ್ಮೆ ಉದ್ಘೋಷದೊಂದಿಗೆ ನಡೆದ ʼಕರ್ನಾಟಕ ಪೊಲೀಸ್‌ ರನ್‌ʼ ಮ್ಯಾರಾಥಾನ್‌ಗೆ ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು.

ಮ್ಯಾರಾಥಾನ್‌ನಲ್ಲಿ ಭಾಗವಹಿಸಿ ವಿಜೇತರಾದ ಪೊಲೀಸ್‌ ತಂಡಗಳಿಗೆ, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಹುಮಾನ ನೀಡಲಾಯಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ.ಕೆ.ಗೋವಿಂದರಾಜು, ಎಡಿಜಿಪಿ ಅಲೋಕ್‌ ಮೋಹನ್‌, ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಬಿ.ದಯಾನಂದ್‌ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

Tags: