ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಮಾಜಿ ರಾಜ್ಯಪಾಲರೂ ಆದ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಅವರೇ ಯುವ ಕಾಂಗ್ರೆಸ್ ನಾಯಕರ ನಡೆಯನ್ನು ಖಂಡಿಸಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಶಿಸ್ತು ಮತ್ತು ಸಭ್ಯತೆ ಅತ್ಯಂತ ಮುಖ್ಯ ಎಂದು ಅವರು ಒತ್ತಿ ಹೇಳಿದ್ದಾರೆ. ‘ಇಂಡಿಯಾ ಎಐ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಅರೆನಗ್ನ ಪ್ರತಿಭಟನೆ ಕುರಿತು ಉದ್ಭವಿಸಿರುವ ವಿವಾದ ಸಂಬಂಧ ಪ್ರತಿಕ್ರಿಯಿಸಿದ ಅವರು, ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಘನತೆ, ಶಿಸ್ತು ಮತ್ತು ಜವಾಬ್ದಾರಿ ಇರಬೇಕು ಎಂದು ಭಾವಿಸುತ್ತೇನೆ ಎಂದಿದ್ದಾರೆ.
ಇತ್ತೀಚೆಗೆ ದಿಲ್ಲಿಯಲ್ಲಿ ನಡೆದ ಎಐ ಶೃಂಗಸಭೆ ಸಂದರ್ಭ ಭಾರತ ಯುವ ಕಾಂಗ್ರೆಸ್ ಸದಸ್ಯರು ಶರ್ಟ್‌ಗಳನ್ನು ಬಿಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದರು. ಈ ಘಟನೆ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.
ದಿಲ್ಲಿಯ ಭಾರತ್ ಮಂಟಪದಲ್ಲಿ ನಡೆದ ಎಐ ಶೃಂಗಸಭೆ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಬಂಡವಾಳಗಾರರ ಗಮನಸೆಳೆದ ಕಾರ್ಯಕ್ರಮವಾಗಿತ್ತು. ಆ ಸಂದರ್ಭದಲ್ಲಿ ನಡೆದ ಯುವ ಕಾಂಗ್ರೆಸ್ ಪ್ರತಿಭಟನೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪ್ರತಿಭಟನೆ ವೇಳೆ ಭಾರತ ಯುವ ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ನರಸಿಂಹ ಅವರನ್ನು ಪೊಲೀಸರು ಬಂಧಿಸಿದ್ದರು.
ಇನ್ನೊಂದೆಡೆ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹ ಯುವ ಕಾಂಗ್ರೆಸ್ ನಾಯಕರ ಅರೆನಗ್ನ ಪ್ರತಿಭಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಇದೊಂದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ.
ಎಐ ಶೃಂಗಸಭೆ ವೇಳೆ ನಡೆದಿದ್ದೇನು?
ಭಾರತ್ ಮಂಟಪಂನಲ್ಲಿ ನಡೆದ ಎಐ ಶೃಂಗಸಭೆಯ ಸಂದರ್ಭದಲ್ಲಿ ಯುವ ಕಾಂಗ್ರೆಸ್ಸಿನ 10 ಮಂದಿ ನಾಯಕರು ಏಕಾಏಕಿ ತಾವು ತೊಟ್ಟಿದ್ದ ಶರ್ಟನ್ನು ಕಳಚಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…