Mysore
22
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಜೆಡಿಎಸ್‌ಗೆ ಗುಡ್‌ಬೈ ಹೇಳಿದ ಎಂಎಲ್‌ಸಿ ಮರಿತಿಬ್ಬೇಗೌಡ!

ಹುಬ್ಬಳ್ಳಿ: ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ ಜೆಡಿಎಸ್ ಪಕ್ಷಕ್ಕೆ ಗುಡ್ ​ಬೈ ಹೇಳಿದ್ದಾರೆ.

ಜೊತೆಗೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಮರಿತಿಬ್ಬೇಗೌಡ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ತೆರಳಿ ಮರಿತಿಬ್ಬೇಗೌಡ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕಾರ ಮಾಡಿದ್ದಾರೆ.

ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಎಚ್‌.ಡಿ ದೇವೆಗೌಡ, ಎಚ್‌​ಡಿಕೆ ನಮಗೆ ಸರಿಯಾಗಿ ಸ್ಪಂದಿಸಲಿಲ್ಲ. ನಿಷ್ಠಾವಂತರನ್ನು ಕಡೆಗಣನೆ ಮಾಡಿದ್ದಾರೆ. ನಾವು ಈ ವಿಷಯ ಅವರಿಗೆ ಹೇಳಿದರೆ, ಅದು ನಮ್ಮ ವರಿಷ್ಠರಿಗೆ ಹಿಡಿಸಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮತ್ತು ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

Tags:
error: Content is protected !!