ಬೆಂಗಳೂರು : ಜಮ್ಮು ಕಾಶ್ಮೀರದ ರಚೌರಿಯಲ್ಲಿ ನಡೆದ ಉಗ್ರರೊಂದಿಗಿನ ಗುಂಡಿ ಕಾಳಗದಲ್ಲಿ ಮಡಿದ ಹುತಾತ್ಮ ಕನ್ನಡಿಗ ಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಅಂತ್ಯಕ್ರಿಯೆ ನೆರವೇರಿತು.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಸೋಮಸುಂದರ ಪಾಳ್ಯದಲ್ಲಿ ಬೆಳಿಗ್ಗೆ ೮ ರಿಂದಲೇ ಪಾರ್ಥೀವ ಶರೀರವನ್ನು ಸಾರ್ವಜಿನಿಕರ ದರ್ಶನಕ್ಕೆ ಇಡಲಾಗಿತ್ತು. ನಂತರ ತೆರೆದ ವಾಹನದಲ್ಲಿ ಸರ್ಕಾರಿ ಗೌರವದೊಂದಿಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಈ ಮೆರವಣಿಗೆಯು ಜಿಗಣಿಯ ಓಟಿಸಿ ಸರ್ಕಲ್, ಕೋನಪ್ಪನ ಅಗ್ರಹಾರ ವೃತ್ತ ಕೂಡ್ಲು ಗೇಟ್ ಮಾರ್ಗವಾಗಿ ಸೋಮಸುಂದರ ಪಾಳ್ಯ ಚಿತಾಗಾರಕ್ಕೆ ತರಲಾಯಿತು.
ಪೊಲೀಸ್ ಮತ್ತು ಮಿಲಿಟರಿ ಪಡೆಗಳು ಹುತಾತ್ಮ ಯೋಧನಿಗೆ ಗೌರವ ವಂದನೆ ಸಲ್ಲಿಸಿದರು. ಕುಟುಂಬ ಸದಸ್ಯರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ಸೋಮಸುಂದರಪಾಳ್ಯದ ಚಿತಾಗಾರದಲ್ಲಿ ಪ್ರಾಂಜಲ್ ಅವರ ಅಂತ್ಯಕ್ರಿಯೆ ನೆರವೇರಿತು.
https://x.com/Bnglrweatherman/status/1728349088771723412?s=20





