ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್‌ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಸ್ಕ್‌ಮ್ಯಾನ್ ಬಂಧನವಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೇರೆ ಯಾವುದೇ ವಿಚಾರ ಹೇಳಲಾಗುವುದಿಲ್ಲ. ವರದಿ ಬಂದ ಬಳಿಕವೇ ಎಲ್ಲವೂ ಗೊತ್ತಾಗಲಿದೆ. ವರದಿ ಬರುವ ಮನ್ನ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.
ತನಿಖೆ ನಡೆಯುವಾಗ ನಾವು ಹೇಳಿಕೆ ಕೊಡುವುದಿಲ್ಲ. ಗೊಂದಲ ಸೃಷ್ಟಿ ಮಾಡುವಂತಿಲ್ಲ. ಯಾವುದಾದರೂ ಜಾಲ ಇದೆಯೇ ಇಲ್ಲವೇ ಷಡ್ಯಂತ್ರ ನಡೆದಿದೆಯೇ? ಎಲ್ಲವೂ ಎಸ್‌ಐಟಿ ತನಿಖೆ ಮೂಲಕವೇ ಬಯಲಾಗಬೇಕಿದೆ. ತನಿಖೆ ವರದಿ ಬಂದ ಬಳಿಕವೇ ಎಲ್ಲವೂ ಗೊತ್ತಾಗುತ್ತದೆ ಎಂದು ಹೇಳಿದರು.





