Mysore
26
light rain

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ ಒಂದು ವಾರ ಕಳೆದಿದೆ. ಆದರೂ ಆತನ ಇನ್ನೂ ಶಿವಮೊಗ್ಗ ಜೈಲಿನಲ್ಲೇ ಇದ್ದಾನೆ.

ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿ ದೂರು ನೀಡಿದ್ದ ಚಿನ್ನಯ್ಯ ಬಳಿಕ ತಾನು ಹೇಳಿದ್ದು ಸುಳ್ಳು ಎಂದು ಹೇಳಿ ಆರೋಪಿಯಾಗಿ ಬದಲಾಗಿದ್ದ. ತನಿಖೆಯ ವೇಳೆ ಚಿನ್ನಯ್ಯ ಹೇಳಿದ್ದ ಹಲವು ಸ್ಥಳಗಳಲ್ಲಿ ಅಗೆದು ಪರೀಕ್ಷೆ ಮಾಡಲಾಗಿತ್ತು.

ಇದನ್ನು ಓದಿ: ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ ಚಿನ್ನಯ್ಯಗೆ ಜಾಮೀನು

ಈ ನಡುವೆಯೇ ಚಿನ್ನಯ್ಯ ಹೇಳಿಕೆ ಬದಲಿಸಿ ತಾನು ಸುಳ್ಳು ಸಾಕ್ಷ್ಯ ಹೇಳಿರುವುದಾಗಿ ಎಸ್‌ಐಟಿ ಮುಂದೆ ಒಪ್ಪಿಕೊಂಡಿದ್ದ. ಆತನ ಹೇಳಿಕೆಯ ಆಧಾರದ ಮೇಲೆಯೇ ಎಸ್‌ಐಟಿ ಚಿನ್ನಯ್ಯನನ್ನು ಬಂಧಿಸಿ ಶಿವಮೊಗ್ಗ ಜೈಲಿಗೆ ಕಳುಹಿಸಿದ್ದರು.

ಚಿನ್ನಯ್ಯನ ಪರವಾಗಿ ವಾದ ಮಾಡಲು ನ್ಯಾಯಾಲಯ ಕಾನೂನು ಸೇವಾಪ್ರಾಧಿಕಾರದಿಂದ ವಕೀಲರನ್ನು ನೀಡಿತ್ತು. ಈ ವಕೀಲರ ತಂಡದಿಂದಾಗಿ ಚಿನ್ನಯ್ಯನಿಗೆ ನವೆಂಬರ್‌.26ರಂದು ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿತ್ತು.

ಇಬ್ಬರು ಜಾಮೀನುದಾರರು, 1 ಲಕ್ಷ ಭದ್ರತೆ ಬಾಂಡ್‌ ನೀಡಲು ಕೋರ್ಟ್‌ ಆದೇಶ ನೀಡಿತ್ತು. ಆದರೆ ಯಾರೂ ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆಯಲ್ಲಿ ಇನ್ನೂ ಶಿವಮೊಗ್ಗದ ಜೈಲಿನಲ್ಲಿಯೇ ಚಿನ್ನಯ್ಯ ಇರುವಂತಾಗಿದೆ.

Tags:
error: Content is protected !!