ರಾಜ್ಯ

ಶಿವಮೊಗ್ಗ ಜೈಲಿನಿಂದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ.

ಚಿನ್ನಯ್ಯನಿಗೆ ನವೆಂಬರ್.‌24ರಂದು ಬೆಳ್ತಂಗಡಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಚಿನ್ನಯ್ಯ ಕೋರ್ಟ್‌ ಆದೇಶದಂತೆ ವೈಯಕ್ತಿಕ ಬಾಂಡ್‌ ಹಾಗೂ ಇತರೆ ಅಂಶಗಳನ್ನು ಸಲ್ಲಿಸದ ಹಿನ್ನೆಲೆಯಲ್ಲಿ ಜಾಮೀನು ನೀಡುವ ಪ್ರಕ್ರಿಯೆ ವಿಳಂಬವಾಗಿತ್ತು. ಹೀಗಾಗಿ ಆತ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿಯೇ ಇದ್ದ.

ಇದನ್ನು ಓದಿ: ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಚಿನ್ನಯ್ಯನ ಪತ್ನಿ ಮಲ್ಲಿಕಾ ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುಧವಾರ ಜಾಮೀನು ಪ್ರಕ್ರಿಯೆ ಮುಗಿಸಿದ ಬಳಿಕ ಇಂದು ಬೆಳಿಗ್ಗೆ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಚಿನ್ನಯ್ಯ ಬಿಡುಗಡೆ ಆಗಿದ್ದಾನೆ.

ಈತ ಎರಡು ದಿನಕ್ಕೊಮ್ಮೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂದು ಬೆಳ್ತಂಗಡಿ ನ್ಯಾಯಾಲಯವು ಷರತ್ತು ವಿಧಿಸಿದೆ.

ಆಂದೋಲನ ಡೆಸ್ಕ್

Recent Posts

ಇಟಲಿ ಬಳಿ ಘೋರ ದುರಂತ: ಸಮುದ್ರದಲ್ಲಿ ದೋಣಿ ಮುಳುಗಿ 71 ಜನ ನಾಪತ್ತೆ

ರೋಮ್:‌ ಇಟಲಿ ಕರಾವಳಿಯಲ್ಲಿ ಭೀಕರ ಬೋಟ್‌ ದುರಂತ ಸಂಭವಿಸಿದ್ದು, ಮೆಡಿಟೇರಿಯನ್‌ ಸಮುದ್ರದಲ್ಲಿ ಬೋಟ್‌ ಮುಳುಗಿ 71 ಜನರು ನಾಪತ್ತೆಯಾಗಿದ್ದಾರೆ. ಈಸ್ಟರ್‌…

21 mins ago

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ವಿಚಾರ: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌…

31 mins ago

ಇನ್ನೂ ಎರಡು ವರ್ಷ ಸಿದ್ದರಾಮಯ್ಯನವರೇ ಸಿಎಂ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ…

41 mins ago

ಡೊನಾಲ್ಡ್‌ ಟ್ರಂಪ್‌ ಡೆಡ್‌ಲೈನ್‌ಗೆ ಇರಾನ್‌ ಕೌಂಟರ್‌: ಏನದು ಗೊತ್ತಾ.?

ಟೆಹರಾನ್:‌ ನಷ್ಟ ಪರಿಹಾರವಿಲ್ಲದೇ ಹಾರ್ಮುಜ್‌ ಜಲಸಂಧಿ ಓಪನ್‌ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಕೌಂಟರ್‌ ಕೊಟ್ಟಿದೆ.…

1 hour ago

ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ: 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಅಮೇರಿಕಾ ಮತ್ತು ಇರಾನ್‌ ನಡುವಿನ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಅಭಯ…

1 hour ago

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಕಸರತ್ತು ಸಲ್ಲದು

ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ…

2 hours ago