ಗದಗ: ಉತ್ತರ ಕರ್ನಾಟಕದ ಸೈಹಾದ್ರಿ, ಆಯುರ್ವೇದ ಔಷಧಿಯ ಸಸ್ಯಕಾಶಿ, ದೇಶದಲ್ಲಿಯೇ ಶುದ್ಧ ಗಾಳಿಗೆ ಹೆಸರಾದ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೇಸಿಗೆ ಆರಂಭಕ್ಕೂ ಮುನ್ನ ಕಪ್ಪತ್ತಗುಡ್ಡ ಬೆಂಕಿಗಾಹುತಿಯಾಗಿದ್ದು, ಮುಂಡರಗಿ ತಾಲ್ಲೂಕಿನ ಡೋಣಿ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡಿದೆ.
ಡೋಣಿ ಬಳಿಯ ನಂದಿವೇರಿ ಮಠದ ಹಿಂಭಾಗ, ಬಂಗಾರಕೊಳ್ಳ, ದೊಡ್ಡ ಬಂಗಾರಕೊಳ್ಳ, ಉಪ್ಪಾರತಟ್ಟು, ನವಣೆ ರಾಶಿ, ಎತ್ತಿನಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯ ಕೆನ್ನಾಲಿಗೆಗೆ ಸುಮಾರು ನೂರಾರು ಹೆಕ್ಟೇರ್ ಪ್ರದೇಶದ ಅರಣ್ಯ ಸುಟ್ಟು ಕರಕಲಾಗಿದೆ. ಬೆಂಕಿಗೆ ಸಿಲುಕಿ ಸರೀಸೃಪಗಳು, ಔಷಧೀಯ ಸಸ್ಯಗಳು, ಪ್ರಾಣಿ, ಪಕ್ಷಿಗಳು ಬೆಂಕಿಗಾಹುತಿಯಾಗಿವೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…