Mysore
24
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ರಾಜ್ಯಾದ್ಯಂತ ಕನ್ನಡಿಗರಿಗೆ ಉದ್ಯೋಗಕ್ಕಾಗಿ ಬೃಹತ್ ಪ್ರತಿಭಟನೆ

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಇಂದು ಬೆಳಿಗ್ಗೆ ೧೧ ಗಂಟೆಯಿಂದ ೪ ಗಂಟೆ ವರೆಗೆ ರಾಜ್ಯದಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಕರವೇ ಅಧ್ಯಕ್ಷ ಟಿ ಎ ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್‌ ಹೋರಾಟಕ್ಕೆ ನಡೆಯಲಿದ್ದು, ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಶೇಕಡಾ ೧೦೦ ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು, ಇತರೆ ಗ್ರೂಪ್‌ ಗಳಲ್ಲಿ ಶೇಕಡಾ ೮೦ರಷ್ಟು ಮೀಸಲಾತಿ ನೀಡಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಲಿದ್ದಾರೆ.

Tags:
error: Content is protected !!