Mysore
30
few clouds

Social Media

ಮಂಗಳವಾರ, 27 ಜನವರಿ 2026
Light
Dark

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಮುಂದಾಗಿದೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮನ್‌ರೇಗಾ ಯೋಜನೆಯ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಮಾಡುತ್ತೇವೆ. ಕೇಂದ್ರ ಸರ್ಕಾರದ ನಡೆ ಖಂಡಿಸಿ ನಾಳೆ ಹೋರಾಟ ನಡೆಸುತ್ತೇವೆ. ನಾಳಿನ ಹೋರಾಟದಲ್ಲಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಭಾಗಿಯಾಗಬಹುದು ಎಂದು ಹೇಳಿದರು.

 

 

Tags:
error: Content is protected !!