Mysore
17
overcast clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಬಾಣಂತಿಯರ ಸರಣಿ ಸಾವು ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಿಡಿ

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಾಗುತ್ತಿರುವ ವಿಚಾರವಾಗಿ ಇಂದು ಸದನದಲ್ಲಿ ಪ್ರತಿಪಕ್ಷದ ನಾಯಕ ಆರ್.‌ಅಶೋಕ್‌ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅಶೋಕ್‌ ಅವರು, ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆ ಆಗಿ ಹೋಗಿದೆ. ಬಾಣಂತಿಯರ ಸಾವಿನ ಬಗ್ಗೆ ಅಧಿಕಾರಿಗಳನ್ನು ಕೇಳಿದ್ರೆ ಸಾಕು ಅವರು ಬೇಜಾವಾಬ್ದಾರಿ ಹೇಳಿಕೆ ನೀಡುತ್ತಿದ್ದು, ಮೆಡಿಸನ್‌ ಸಮಸ್ಯೆ ಎಂದು ಹಾರಿಕೆಯ ಉತ್ತರ ನೀಡುತ್ತಿದ್ದಾರೆ.

ಇನ್ನು ಕೆಲ ಅಧಿಕಾರಿಗಳು ಈ ಪ್ರಕರಣದಲ್ಲಿ ನಾನು ಪಾತ್ರಧಾರಿ ಅಲ್ಲದಿದ್ದರೂ ನನ್ನನ್ನು ಸಸ್ಪೆಂಡ್‌ ಮಾಡಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಆಸಕ್ತಿ ಇದ್ದಿದ್ದರೆ ನ್ಯಾಯಾಂಗ ತನಿಖೆ ಮಾಡಬೇಕಿತ್ತು ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈಗ ಯಾರೂ ಕೂಡ ಸರ್ಕಾರಿ ಆಸ್ಪತ್ರೆಗೆ ಹೋಗಬಾರದು ಎನ್ನುವ ತೀರ್ಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.

ಅಶೋಕ್‌ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಕೋನರೆಡ್ಡಿ ಅವರು, ಎಲ್ಲರೂ ಕೂಡ ಖಾಸಗಿ ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಒಳ್ಳೆಯ ಸೌಲಭ್ಯಗಳಿವೆ. ಬಡವರು ಖಾಸಗಿ ಆಸ್ಪತ್ರೆಗೆ ಹೋಗಲು ಸಾಧ್ಯವಾಗುವುದಿಲ್ಲ. ನೀವು ಒಳ್ಳೆಯ ಸಲಹೆಗಳನ್ನು ನೀಡಿ ಎಂದು ಆರ್.‌ಅಶೋಕ್‌ ಅವರಿಗೆ ಸಲಹೆ ನೀಡಿದರು.

ಈ ಮೂಲಕ ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ರಾಜ್ಯ ಸರ್ಕಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಕರಣದ ತನಿಖೆ ನಡೆಸುವವರೆಗೂ ನಾವು ಸುಮ್ಮನೆ ಕೂರಲ್ಲ ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದು, ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

 

 

 

Tags:
error: Content is protected !!