ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಾಗುತ್ತಿರುವ ವಿಚಾರವಾಗಿ ಇಂದು ಸದನದಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅಶೋಕ್ ಅವರು, ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆ ಆಗಿ ಹೋಗಿದೆ. ಬಾಣಂತಿಯರ ಸಾವಿನ ಬಗ್ಗೆ ಅಧಿಕಾರಿಗಳನ್ನು ಕೇಳಿದ್ರೆ ಸಾಕು ಅವರು ಬೇಜಾವಾಬ್ದಾರಿ ಹೇಳಿಕೆ ನೀಡುತ್ತಿದ್ದು, ಮೆಡಿಸನ್ ಸಮಸ್ಯೆ ಎಂದು ಹಾರಿಕೆಯ ಉತ್ತರ ನೀಡುತ್ತಿದ್ದಾರೆ.
ಇನ್ನು ಕೆಲ ಅಧಿಕಾರಿಗಳು ಈ ಪ್ರಕರಣದಲ್ಲಿ ನಾನು ಪಾತ್ರಧಾರಿ ಅಲ್ಲದಿದ್ದರೂ ನನ್ನನ್ನು ಸಸ್ಪೆಂಡ್ ಮಾಡಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಆಸಕ್ತಿ ಇದ್ದಿದ್ದರೆ ನ್ಯಾಯಾಂಗ ತನಿಖೆ ಮಾಡಬೇಕಿತ್ತು ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈಗ ಯಾರೂ ಕೂಡ ಸರ್ಕಾರಿ ಆಸ್ಪತ್ರೆಗೆ ಹೋಗಬಾರದು ಎನ್ನುವ ತೀರ್ಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.
ಅಶೋಕ್ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಕೋನರೆಡ್ಡಿ ಅವರು, ಎಲ್ಲರೂ ಕೂಡ ಖಾಸಗಿ ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಒಳ್ಳೆಯ ಸೌಲಭ್ಯಗಳಿವೆ. ಬಡವರು ಖಾಸಗಿ ಆಸ್ಪತ್ರೆಗೆ ಹೋಗಲು ಸಾಧ್ಯವಾಗುವುದಿಲ್ಲ. ನೀವು ಒಳ್ಳೆಯ ಸಲಹೆಗಳನ್ನು ನೀಡಿ ಎಂದು ಆರ್.ಅಶೋಕ್ ಅವರಿಗೆ ಸಲಹೆ ನೀಡಿದರು.
ಈ ಮೂಲಕ ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ರಾಜ್ಯ ಸರ್ಕಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಕರಣದ ತನಿಖೆ ನಡೆಸುವವರೆಗೂ ನಾವು ಸುಮ್ಮನೆ ಕೂರಲ್ಲ ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದು, ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…