ರಾಜ್ಯ

ರಾಜ್ಯದಲ್ಲಿ ಆಹಾರ ಪಾರ್ಕ್‌ಗಳ ಸ್ಥಾಪನೆಗೆ ಗರಿಷ್ಠ ಉತ್ತೇಜನ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ಗರಿಷ್ಠ ನೆರವು ಒದಗಿಸಲಾಗುತ್ತಿದೆ. ಈ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಹತ್ತಿರದಲ್ಲಿರುವ ಶಿವಮೊಗ್ಗ ಜಿಲ್ಲೆಯ ಸೋಗಾನೆ ಹಾಗೂ ವಿಜಯಪುರದ ಇಟ್ಟಂಗಿ ಹಾಳದಲ್ಲಿ ಆಹಾರ ಪಾರ್ಕ್‌ಗಳನ್ನು  ಸ್ಥಾಪಿಸಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.

ವಿಧಾನಸಭೆಯಲ್ಲಿ ಸದಸ್ಯರಾದ ಟಿ.ಬಿ.ಜಯಚಂದ್ರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸದ ಸಚಿವರು ರಾಜ್ಯದಲ್ಲಿ ಪುಡ್ ಪಾರ್ಕ್ ಗಳ ಸ್ಥಾಪನೆಗೆ ಪ್ರೋತ್ಸಾಹದ ಜೊತೆಗೆ ಬ್ರಾಂಡಿಗ್ ಗೂ ನೆರವು ಒದಗಿಸಲಾಗುತ್ತಿದೆ ಎಂದರು.

ಆಹಾರ ಪಾರ್ಕ್‍ಗಳ ಅನುಷ್ಠಾನಕ್ಕೆ ಹಾಗೂ ಮೇಲುಸ್ತುವಾರಿ ನಿರ್ವಹಿಸಲು ಆಹಾರ ಕರ್ನಾಟಕ ನಿಯಮಿತ ಎಂಬ ವಿಶೇಷ ಉದ್ದೇಶ ಸಂಸ್ಥೆಯನ್ನು (Special Purpose Vehicle) 2003ರಲ್ಲಿ ಕಂಪನಿ ಕಾಯ್ದೆ 1956ರಡಿಯಲ್ಲಿ ಸ್ಥಾಪಿಸಲಾಗಿದೆ. ಆಹಾರ ಕರ್ನಾಟಕ ನಿಯಮಿತವು ಈ ಹಿಂದೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಡಿಯಲ್ಲಿದ್ದು, ಪ್ರಸ್ತುತ ಕೃಷಿ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಭಾರತ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಮಂತ್ರಾಲಯವು ರಾಜ್ಯದಲ್ಲಿ ಹತ್ತನೇ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ ನಾಲ್ಕು ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲು ಅನುಮೋದನೆ ನೀಡಿರುತ್ತದೆ. ಅದರಂತೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಅಕ್ಷಯ ಫುಡ್‌ ಪಾರ್ಕ್‌, ಬಾಗಲಕೋಟೆಯಲ್ಲಿ ಗ್ರೀನ್‌ ಫುಡ್‌ ಪಾರ್ಕ್‌, ಕೋಲಾರ ಜಿಲ್ಲೆ ಮಾಲೂರಿನಲ್ಲಿ ಇನ್ನೋವಾ ಅಗ್ರಿ ಬಯೋಪಾರ್ಕ್‌, ಮತ್ತು ಕಲಬುರ್ಗಿ ಜಿಲ್ಲೆಯ, ಜೇವರ್ಗಿಯಲ್ಲಿ ಫುಡ್‌ ಪಾರ್ಕ್‌, ಸ್ಥಾಪಿಸಲಾಗಿದೆ. ಉದ್ದೇಶಿತ ಯೋಜನೆಯನ್ವಯ ಪ್ರತಿ ಆಹಾರ ಪಾರ್ಕ್ ಸ್ಥಾಪನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ 50:50 ಅನುಪಾತದಲ್ಲಿ ಒಟ್ಟು 800 ಲಕ್ಷ ರೂಪಾಯಿಗಳನ್ನು ಸಹಾಯ ಧನ/ಬಡ್ಡಿ ರಹಿತ ಅಸುರಕ್ಷಿತ ಸಾಲದ ರೂಪದಲ್ಲಿ ಮಂಜೂರು ಮಾಡಿರುತ್ತದೆ ಎಂದು ಕೃಷಿ ಸಚಿವರು ಹೇಳಿದರು.

ರಾಜ್ಯದ ಆಹಾರ ಪಾರ್ಕುಗಳನ್ನು ಬಲವರ್ದಿಸುವ ನಿಟ್ಟಿನಲ್ಲಿ ನಬಾರ್ಡ್ ಸಂಸ್ಥೆಯ ಅಂಗ ಸಂಸ್ಥೆಯಾದ NABCONS ಸಂಸ್ಥೆಯ ವತಿಯಿಂದ ರಾಜ್ಯ ಪ್ರಾಯೋಜಿತ ಆಹಾರ ಪಾರ್ಕ್‌ಗಳನ್ನು ಪರಿಣಾಮ ಪರಿಶೀಲನ ಅಧ್ಯಯನ ನಡೆಸಲಾಗಿದೆ.

ಆಹಾರ ಪಾರ್ಕ್‌ಗಳನ್ನುಆಂತರಿಕ ರಸ್ತೆ, ಚರಂಡಿಗಳು ಹಾಗೂ ಮೂಲಸೌಕರ್ಯಗಳ ದುರಸ್ಥಿ/ಉನ್ನತೀಕರಣಕ್ಕಾಗಿ ಆಹಾರ ಪಾರ್ಕಿನ ಪ್ರವರ್ತಕರುಗಳೇ ಕ್ರಮ ವಹಿಸಬೇಕಾಗಿದ್ದು, NABARD ಸಂಸ್ಥೆಯಿಂದ ಕಡಿಮೆ ಬಡ್ಡಿ ದರದಲ್ಲಿ ಲಭ್ಯವಿರುವ ಆಹಾರ ಸಂಸ್ಕರಣಾ ನಿಧಿಯಿಂದ ಅಥವಾ India Infrastructure Fund ನಲ್ಲಿ ಇಕ್ವಿಟಿ ರೂಪದಲ್ಲಿ ನೀಡಲಾಗುತ್ತಿರುವ ಸಾಲ ಸೌಲಭ್ಯವನ್ನು ಬಳಸಿಕೊಂಡು ಅಭಿವೃದ್ಧಿ ಪಡಿಸಲು ಸೂಚಿಸಲಾಗಿದೆ ಎಂದು ಎನ್.ಚಲುವರಾಯಸ್ವಾಮಿ ವಿವರಿಸಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ರೈತರ ಗುಂಪುಗಳು, ರೈತ ಉತ್ಪಾದಕ ಸಂಸ್ಥೆಗಳು ಬೆಳೆಯುತ್ತಿರುವ ಉತ್ಪನ್ನಗಳನ್ನು ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೊಳಿಸಲು ಆಹಾರ ಪಾರ್ಕ್‌ಗಳನ್ನು ಲಭ್ಯವಿರುವ ಸಾಮಾನ್ಯ ಸೌಲಭ್ಯಗಳನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ ಎಂದರು.

ಆಹಾರ ಪಾರ್ಕ್‌ಗಳನ್ನು ನಿರೀಕ್ಷಿತ ಮಟ್ಟದಲ್ಲಿ ಸಂಸ್ಕರಣ ಘಟಕಗಳು ಸ್ಥಾಪನೆಯಾಗಿಲ್ಲದೇ ಇರುವುದರಿಂದ ಆಹಾರ ಪಾರ್ಕ್‌ಗಳನ್ನು ಪ್ರವರ್ತಕರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಏಕ ಗವಾಕ್ಷಿ ಸಮಿತಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸಹಯೋಗವನ್ನು ಪಡೆದು ಕೈಗಾರಿಕೆಗಳ ಸ್ಥಾಪನೆಗೆ ಇರುವ ಅಡಚಣೆಗಳನ್ನು ನಿವಾರಿಸಿಕೊಳ್ಳಬಹುದಾಗಿದೆ.

ಘಟಕ ಪ್ರಾರಂಭಿಸಲು ಆಸಕ್ತಿ ವಹಿಸದ ಉದ್ದಿಮೆದಾರರಿಂದ ಕೈಗಾರಿಕಾ ನಿವೇಶನಗಳನ್ನು ಮರು ಹಂಚಿಕೆ ಮಾಡಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಹಯೋಗದೊಂದಿಗೆ ಕ್ರಮವಹಿಸಲು ಸೂಚಿಸಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

6 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

7 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

9 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

9 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago