Mysore
28
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಮೇ 31 ರಾಜ್ಯಕ್ಕೆ ಮುಂಗಾರು ಪ್ರವೇಶ

ಹೊಸದಿಲ್ಲಿ: ಈ ಬಾರಿ  ಮುಂಗಾರು ಪೂರ್ವ ಮಳೆ ಕರ್ನಾಟಕದಲ್ಲಿ ಅಬ್ಬರಿಸುತ್ತಿದೆ. ಈ ನಡುವೆ ಹವಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದು, ಇದೇ ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಭೀಕರ ಬರಗಾಲ ಎದುರಿಸಿದ್ದವು. ಆದರೆ ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದ್ದು, ರಾಜ್ಯ ಜನತೆ ನಿಟ್ಟುಸಿರು ಬಿಟ್ಟಂತಾಗಿದೆ.

ಕೃಷಿ ಆಧಾರಿತ ಭಾರತದ ಆರ್ಥಿಕತೆಗೆ ಜೂನ್‌, ಜುಲೈ, ಆಗಸ್ಟ್‌ ಹಾಗೂ ಸೆಪ್ಟಂಬರ್‌ ತಿಂಗಳುಗಳೇ ನಿರ್ಣಾಯಕ. ಈ ನಾಲ್ಕು ತಿಂಗಳು ಮಳೆಗಾಲಕ್ಕೆ ಉತ್ತಮ ವೇದಿಕೆಯಾಗಿದೆ. ಆಗಸ್ಟ್‌ ಮತ್ತು ಸೆಪ್ಟಂಬರ್‌ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕ ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಜೂನ್‌ 2 ಅಥವಾ 3ಕ್ಕೆ ಪ್ರವೇಶ ಮಾಡುವ ನೀರಿಕ್ಷೆ ಇದೆ. ಹೀಗಾಗಿ ಹವಮಾನ ಇಲಾಖೆ ಅಧಿಕಾರಿಗಳು ಕೂಡ ಮುಂಗಾರು ಮಾರುತಗಳ ಚಲನವಲನ ಪರಿಶೀಲನೆ ಮಾಡಿ ರೈತರಿಗೆ ಮಾಹಿತಿ ನೀಡುತ್ತಿದ್ದಾರೆ.

ಹವಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ಈ ಬಗ್ಗೆ ಮಾಹಿತಿ ನೀಡಿ, ಸಾಮಾನ್ಯವಾಗಿ ಕೇರಳದಲ್ಲಿ ಮಾನ್ಸೂನ್ ಪ್ರಾರಂಭವಾಗುವ ದಿನಾಂಕ ಜೂನ್ 1 ಆಗಿರುವುದರಿಂದ ಇದು ಆ ದಿನಕ್ಕೆ ಹತ್ತಿರವಾಗಿದೆ. ಅಲ್ಲದೇ ಈ ಬಾರಿ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿತ್ತು. ಇದಕ್ಕೆ ಪೂರಕ ಎಂಬಂತೆ ಮುಂಗಾರು ಚಲನೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಮುಂಗಾರು ಪ್ರವೇಶವು ಕಳೆದ 150 ವರ್ಷಗಳಿಂದ ಬದಲಾಗುತ್ತಿದೆ. 1918ರಲ್ಲಿ ಮುಂಗಾರು ಮೇ 11ರಂದು ರಾಜ್ಯ ಪ್ರವೇಶಿಸಿತ್ತು. ಬಳಿಕ 1972 ಜೂನ್ 18, 2020ರ ಜೂನ್ 1, 2021ರ ಜೂನ್ 3, 2022ರಲ್ಲಿ ಮೇ 29, ಕಳೆದ ವರ್ಷ ಜೂನ್ 8ರಂದು ಮುಂಗಾರು ಮಳೆಯ ಪ್ರವೇಶವಾಗಿತ್ತು. ಈ ಬಾರಿ ಮುಂಚಿತವಾಗಿಯೇ ಮುಂಗಾರಿನ ಆಗಮನದಿಂದ ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ. ದೀರ್ಘಾವಧಿಯ ಸರಾಸರಿಗೆ ಹೋಲಿಸಿದರೆ ಈ ಋತುವಿನಲ್ಲಿ ಹೆಚ್ಚಿನ ಮಳೆಯನ್ನು  ದಾಖಲಿಸುವ ಸಾಧ್ಯತೆ ಇದೆ. ವಾಯುವ್ಯ, ಪೂರ್ವ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

Tags:
error: Content is protected !!