Mysore
27
scattered clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

Caste Census Report; ಸಂಪುಟ ಸಭೆಯಲ್ಲಿ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಇಂದು ಸಂಜೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಾತಿ ಗಣತಿ ವರದಿಗೆ ಸಂಬಂಧಿಸಿದಂತೆ ಯಾವ ಸಮುದಾಯವು ಆತಂಕಕ್ಕೆ ಒಳಗಾಗಬಾರದು. ಸಭೆಯಲ್ಲಿ ಎಲ್ಲಾ ಸಮುದಾಯಕ್ಕೂ ಸಮಾಧಾನ ಆಗುವಂತೆ ನಿರ್ಧಾರ ಮಾಡುತ್ತೇವೆ. ಎಲ್ಲಾ ಸಮಸ್ಯೆಗೂ ಪರಿಹಾರ ಹುಡುಕುವ ಕೆಲಸ ಮಾಡಲಾಗುವುದು. ನೂರಕ್ಕೆ ನೂರರಷ್ಟು ಈ ಸಮಸ್ಯೆ ಬಗೆಹರಿಯಲಿದೆ ಎಂದರು.

ಇನ್ನು ಜಾತಿಗಣತಿ ವರದಿ ಸಂಪೂರ್ಣವಾಗಿ ಓದಿ ತಿಳಿದುಕೊಂಡಿದ್ದೇವೆ. ಆದ್ದರಿಂದ ಯಾವ ಸಮುದಾಯದವರು ಆತಂಕಕ್ಕೆ ಒಳಗಾಗುವುದು ಬೇಡ. ಇಂದು ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ ಎಂದು ತಿಳಿಸಿದರು.

Tags:
error: Content is protected !!