ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆಗಿದ್ದು ಸತ್ಯ ಆದರೆ ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಮುಡಾ ಹಗರಣ ಕುರಿತು ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ ಬಗ್ಗೆ ಎಸ್ ಐಟಿ ಮತ್ತಯ ಇಡಿ ತನಿಖೆ ನಡೆಸುತ್ತಿದೆ. ಬ್ಯಾಂಕ್ ಅಧಿಕಾರಿಗಳ ತಪ್ಪಿದೆ. ಈ ಹಗರಣದಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ. ಕೇಂದ್ರ ವಿತ್ತ ಸಚಿವರು ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಸರ್ಕಾರದಲ್ಲೂ ಹಗರಣ ನಡೆದಿದೆ. ಬಿಜೆಪಿ ಅವಧಿಯಲ್ಲಿ ಆಗಿರುವ ಹಗರಣಗಳ ತನಿಖೆ ನಡೆಸುತ್ತೇವೆ ಎಂದರು.
ಅಲ್ಲದೆ ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ವಿರುದ್ಧ ನೇರವಾಗಿ ಆರೋಪ ಇಲ್ಲ. ತನಿಖೆ ಆಗುತ್ತಿದೆ. ಅವರ ಪಾತ್ರ ಇದೆಯೋ ಇಲ್ಲವೋ ಎಂಬುವುದು ಗೊತ್ತಾಗುತ್ತದೆ. ನಿಗಮಗಳಲ್ಲಿ ಮೌಖಿಕ ಆದೇಶ ಇಲ್ಲ. ಲಿಖಿತವಾಗಿ ಆದೇಶ ನೀಡಿದರೂ ಕಾನೂನು ಬಾಹಿರವಾಗಿ ವ್ಯವಸ್ಥಾಪಕ ನಿರ್ದೇಶಕರು ಮಾಡಬಾರದು. ವಾಲ್ಮೀಕಿ ಹಗರಣದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಪಾತ್ರ ಇದೆ. ತಪ್ಪಿತಸ್ಥರು ಯಾರೇ ಇದ್ರೂ ಶಿಕ್ಷೆ ಆಗಲಿದೆ ಎಂದು ಹೇಳಿದರು.