ರಾಜ್ಯ

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಆಗಿದ್ದು ಸತ್ಯ ಆದರೆ ಮುಡಾದಲ್ಲಿ ಹಗರಣ ನಡೆದಿಲ್ಲ ; ಎಂ.ಬಿ ಪಾಟೀಲ್

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆಗಿದ್ದು ಸತ್ಯ ಆದರೆ ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದಾರೆ.

ಮುಡಾ ಹಗರಣ ಕುರಿತು ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ ಬಗ್ಗೆ ಎಸ್‌ ಐಟಿ ಮತ್ತಯ ಇಡಿ ತನಿಖೆ ನಡೆಸುತ್ತಿದೆ. ಬ್ಯಾಂಕ್‌ ಅಧಿಕಾರಿಗಳ ತಪ್ಪಿದೆ. ಈ ಹಗರಣದಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ. ಕೇಂದ್ರ ವಿತ್ತ ಸಚಿವರು ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಸರ್ಕಾರದಲ್ಲೂ ಹಗರಣ ನಡೆದಿದೆ. ಬಿಜೆಪಿ ಅವಧಿಯಲ್ಲಿ ಆಗಿರುವ ಹಗರಣಗಳ ತನಿಖೆ ನಡೆಸುತ್ತೇವೆ ಎಂದರು.

ಅಲ್ಲದೆ ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ವಿರುದ್ಧ ನೇರವಾಗಿ ಆರೋಪ ಇಲ್ಲ. ತನಿಖೆ ಆಗುತ್ತಿದೆ. ಅವರ ಪಾತ್ರ ಇದೆಯೋ ಇಲ್ಲವೋ ಎಂಬುವುದು ಗೊತ್ತಾಗುತ್ತದೆ. ನಿಗಮಗಳಲ್ಲಿ ಮೌಖಿಕ ಆದೇಶ ಇಲ್ಲ. ಲಿಖಿತವಾಗಿ ಆದೇಶ ನೀಡಿದರೂ ಕಾನೂನು ಬಾಹಿರವಾಗಿ ವ್ಯವಸ್ಥಾಪಕ ನಿರ್ದೇಶಕರು ಮಾಡಬಾರದು. ವಾಲ್ಮೀಕಿ ಹಗರಣದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಪಾತ್ರ ಇದೆ. ತಪ್ಪಿತಸ್ಥರು ಯಾರೇ ಇದ್ರೂ ಶಿಕ್ಷೆ ಆಗಲಿದೆ ಎಂದು ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago