mb patil Pahalgam terrorist attack
ವಿಜಯಪುರ: ನೆರೆಯ ದೇಶ ಪಾಕಿಸ್ತಾನದ ವಿರುದ್ಧ ಯುದ್ಧ ಆಗಲೇಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿ ಸಂಬಂಧ ಮಾನವೀಯತೆಯಲ್ಲಿ ನಂಬಿಕೆ ಇಟ್ಟವರು ಈ ಘಟನೆಯನ್ನು ಖಂಡಿಸಬೇಕು. ಪಾಕಿಸ್ತಾನವನ್ನು ಸದೆಬಡಿಯಬೇಕು ಎಂದರು.
ಇದನ್ನೂ ಓದಿ:- ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗ್‌ನಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ್ ಭಟ್
ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಮೂಲೆಗುಂಪು ಮಾಡಬೇಕು. ಜಮ್ಮು-ಕಾಶ್ಮೀರದ ಜನರು ಭಾರತದ ಪರ ಶಾಂತಿಯ ಕಡೆ ಇದ್ದಾರೆ. ಚೀನಾ, ಅಮೇರಿಕಾ ಸೇರಿದಂತೆ ಎಲ್ಲರೂ ಸಹ ಉಗ್ರವಾದವನ್ನು ಖಂಡಿಸಬೇಕು. ಪಾಕ್ ಒಂದು ದರಿದ್ರ ದೇಶ. ಅಲ್ಲಿಯ ಪರಿಸ್ಥಿತಿ ಹೀನಾಯವಾಗಿದೆ. ಯುದ್ಧಕ್ಕೆ ಹೆದರಿ ಸೈನಿಕರು ಹಾಗೂ ಅಧಿಕಾರಿಗಳು ಓಡಿ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಆಯಕಟ್ಟಿನ ಜಾಗದಲ್ಲಿ ಸೇನೆಯನ್ನು ನಿಯೋಜಿಸಬೇಕು. ಪಾಕ್ ವಿರುದ್ಧ ಯುದ್ಧವಾಗಲೇಬೇಕು. ಪಾಕ್‌ಗೆ ತಕ್ಕ ಶಾಸ್ತಿ ಆಗಬೇಕು. ಪ್ರಧಾನಿ ಮೋದಿ ಪರ ಎಲ್ಲಾ ರಾಜಕೀಯ ಪಕ್ಷಗಳು ಇವೆ ಎಂದು ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…