ರಾಜ್ಯ

60 ಲಕ್ಷ ಮನೆಗಳಿಗೆ ಮುಂದಿನ 5 ವರ್ಷಗಳಲ್ಲಿ ಗ್ಯಾಸ್‌ ಪೈಪ್‌ ಲೈನ್‌ ಸಂಪರ್ಕ: ಎಂ.ಬಿ.ಪಾಟೀಲ್‌

ಬೆಂಗಳೂರು: ರಾಜ್ಯದ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ರೀತಿಯ ದರವಿದ್ದ ಹಿನ್ನೆಲೆ ಮನೆಗಳಿಗೆ ಗ್ಯಾಸ್‌ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಇದೀಗ ಈ ಸಮಸ್ಯೆ ಬಗೆಹರಿದಿದ್ದು, ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಮನೆಗಳಿಗೆ ಪೈಪ್‌ ಲೈನ್‌ ಮೂಲಕ ಅಡುಗೆ ಅನಿಲ ಪೂರೈಸಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್‌.4) ಬಜೆಟ್‌ ಅಧಿವೇಶನದಲ್ಲಿ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಡಿ.ಎಸ್‌.ಅರುಣ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಗ್ಯಾಸ್‌ ಪೂರೈಕೆ ಕೊಳವೆ ಅಳವಡಿಸಲು ದೇಶದ ವಿವಿಧ ರಾಜ್ಯಗಳಲ್ಲಿ ಇರುವ ನಗರ ಅನಿಲ ಸರಬರಾಜು ನೀತಿಯ ಪ್ರಕಾರ ಮೀಟರ್‌ಗೆ ಒಂದು ರೂಪಾಯಿ ನಿಗಧಿಪಡಿಸಲಾಗಿದೆ. ಅಲ್ಲದೇ ಉತ್ತರ ಪ್ರದೇಶ ಸೇರಿದಂತೆ ಅನೇಕ ರಾಜ್ಯಗಳಲ್ಲಿನ ಉತ್ತಮ ಉಪಕ್ರಮಗಳ ಬಗ್ಗೆಯೂ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಪತ್ರ ಬರೆದು ತಿಳಿಸಿದೆ ಎಂದರು.

ರಾಜ್ಯದಲ್ಲಿ ಆ ವೇಳೆ ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಸಾರ್ವಜನಿಕ ಹಿತ ಮತ್ತು ಪರಿಸರಸ್ನೇಹಿ ಕ್ರಮವೆಂದೂ ನಾವು ಇದನ್ನು ಒಪ್ಪಿಕೊಂಡಿದ್ದೇವೆ. ಅದರಂತೆ ರಾಜ್ಯದಲ್ಲಿ ಒಟ್ಟು 66.25 ಲಕ್ಷ ಮನೆಗಳಿಗೆ ಸಂಪರ್ಕ ಸೇವೆ ಕಲ್ಪಿಸುವ ಹಾಗೂ 1,022 ಸಿಎನ್‌ಜಿ ಮರುಪೂರ್ಣ ಕೇಂದ್ರಗಳನ್ನು ತೆರೆಯುವ ಗುರಿಯನ್ನಿಟ್ಟುಕೊಳ್ಳಾಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

2 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

3 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

4 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

10 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

10 hours ago