Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮುಂಬೈನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪ್ಲ್ಯಾನ್‌

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ ದೇಶದಲ್ಲೇ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ ಯೋಜಿಸುತ್ತಿದೆ.

ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ ೧ ಲಕ್ಷ ಆಸನಗಳ ಸಾಮರ್ಥ್ಯದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಎದುರು ನೋಡುತ್ತಿದೆ. ಥಾಣೆ ಜಿಲ್ಲೆಯಿಂದ ಸುಮಾರು 26 ಕಿ ಮೀ ಹಾಗೂ ವಾಂಖೆಡೆ ಕ್ರೀಡಾಂಗಣದಿಂದ ೬೮ ಕಿ.ಮೀ ದೂರದಲ್ಲಿರುವ ಅಮಾನೆ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಈಗಾಗಲೇ ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯವಿರುವ ೫೦ ಎಕರೆ ಭೂಪ್ರದೇಶ ಸ್ವಾಧೀನಕ್ಕೆ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ಟೆಂಡರ್‌ ಭರ್ತಿಯಾಗಿದ್ದು, ಸರ್ಕಾರದ ಅನುಮೋದನೆಗಾಗಿ ಕಾಯುತ್ತಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾತನಾಡಿರುವ ಡಿಸಿಎಂ ದೇವೇಂದ್ರ ಫಡ್ನವೀಸ್‌ ಅವರು, ಅತ್ಯಾಧುನಿಕ ಹಾಗೂ ಬೃಹತ್‌ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪರಿಗಣಿಸುವಂತೆ ಸಿಎಂ ಏಕನಾಥ್‌ ಶಿಂಧೆ ಅವರಿಗೆ ಮನವಿ ಮಾಡಿದ್ದೇವೆ. ಮುಂಬೈನಲ್ಲಿ ೧ ಲಕ್ಷ ಆಸನಗಳ ಸಾಮರ್ಥ್ಯದ ಕ್ರೀಡಾಂಗಣ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ಬೃಹತ್‌ ಕ್ರೀಡಾಂಗಣ ನಿರ್ಮಿಸಬೇಕು ಎಂಬುದು ಎಂಸಿಎ ಮಾಜಿ ಅಧ್ಯಕ್ಷ ಅಮೋಲ್‌ ಕಾಳೆ ಅವರ ಕನಸಿನ ಯೋಜನೆಯಾಗಿತ್ತು. ಅವರ ನೆನಪಿನಾರ್ಥವಾಗಿ ಕ್ರೀಡಾಂಗಣ ನಿರ್ಮಾಣವಾಗಬೇಕು ಎಂದು ಹೇಳಿದರು.

 

Tags: