ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ ದೇಶದಲ್ಲೇ 2ನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಯೋಜಿಸುತ್ತಿದೆ.
ಮುಂಬೈ ಕ್ರಿಕೆಟ್ ಅಸೋಸಿಯೇಷನ್ ೧ ಲಕ್ಷ ಆಸನಗಳ ಸಾಮರ್ಥ್ಯದ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಎದುರು ನೋಡುತ್ತಿದೆ. ಥಾಣೆ ಜಿಲ್ಲೆಯಿಂದ ಸುಮಾರು 26 ಕಿ ಮೀ ಹಾಗೂ ವಾಂಖೆಡೆ ಕ್ರೀಡಾಂಗಣದಿಂದ ೬೮ ಕಿ.ಮೀ ದೂರದಲ್ಲಿರುವ ಅಮಾನೆ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಈಗಾಗಲೇ ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯವಿರುವ ೫೦ ಎಕರೆ ಭೂಪ್ರದೇಶ ಸ್ವಾಧೀನಕ್ಕೆ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ಟೆಂಡರ್ ಭರ್ತಿಯಾಗಿದ್ದು, ಸರ್ಕಾರದ ಅನುಮೋದನೆಗಾಗಿ ಕಾಯುತ್ತಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾತನಾಡಿರುವ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರು, ಅತ್ಯಾಧುನಿಕ ಹಾಗೂ ಬೃಹತ್ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಪರಿಗಣಿಸುವಂತೆ ಸಿಎಂ ಏಕನಾಥ್ ಶಿಂಧೆ ಅವರಿಗೆ ಮನವಿ ಮಾಡಿದ್ದೇವೆ. ಮುಂಬೈನಲ್ಲಿ ೧ ಲಕ್ಷ ಆಸನಗಳ ಸಾಮರ್ಥ್ಯದ ಕ್ರೀಡಾಂಗಣ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
ಮುಂಬೈನಲ್ಲಿ ಬೃಹತ್ ಕ್ರೀಡಾಂಗಣ ನಿರ್ಮಿಸಬೇಕು ಎಂಬುದು ಎಂಸಿಎ ಮಾಜಿ ಅಧ್ಯಕ್ಷ ಅಮೋಲ್ ಕಾಳೆ ಅವರ ಕನಸಿನ ಯೋಜನೆಯಾಗಿತ್ತು. ಅವರ ನೆನಪಿನಾರ್ಥವಾಗಿ ಕ್ರೀಡಾಂಗಣ ನಿರ್ಮಾಣವಾಗಬೇಕು ಎಂದು ಹೇಳಿದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…