ರಾಜ್ಯ

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಅರ್ಥಪೂರ್ಣ ತೆರೆ: ಎಂಬಿ ಪಾಟೀಲ್‌

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯಕ್ಕೆ 10,27,378 ಕೋಟಿ ರೂ. ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್‌ ಹೇಳಿದ್ದಾರೆ.

ನಗರದ ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಲಯವಾರು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದರು. ಜತೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು.

ಹೂಡಿಕೆದಾರರ ಸಮಾವೇಶದ ಸಾಧನೆಗಳ ಬಗ್ಗೆ ಮಾತನಾಡಿದ ಸಚಿವರು, `ಕೆಲವು ಪ್ರತಿಷ್ಠಿತ ಕಂಪನಿಗಳು ಭಾರೀ ಹೂಡಿಕೆಗೆ ಆಸಕ್ತಿ ತೋರಿದ್ದು, ಒಡಂಬಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇವು ಆಖೈರಾದರೆ ಸಮಾವೇಶದ ಮೂಲಕ ಬರಲಿರುವ ಬಂಡವಾಳದ ಮೊತ್ತ ಇನ್ನೂ ಗಮನಾರ್ಹವಾಗಿ ಏರಲಿದೆ. ಈಗ ಖಾತ್ರಿಯಾಗಿರುವ ಹೂಡಿಕೆಯಲ್ಲಿ ಶೇಕಡ 75ರಷ್ಟು ಬೆಂಗಳೂರಿನ ಆಚೆ ಇರುವ ಪ್ರದೇಶಗಳಿಗೆ ಹೋಗಲಿದ್ದು, ಶೇಕಡ 45ರಷ್ಟು ಬಂಡವಾಳವು ಉತ್ತರ ಕರ್ನಾಟಕದ ಪ್ರದೇಶಗಳಿಗೆ ಹರಿಯಲಿದೆ’ ಎಂದರು.

ಸೃಷ್ಟಿಯಾಗಲಿರುವ 6 ಲಕ್ಷ ಉದ್ಯೋಗಗಳು ತಯಾರಿಕೆ ಮತ್ತು ಇಂಧನ ಉತ್ಪಾದನೆ ಕ್ಷೇತ್ರಕ್ಕೆ ಸೇರಿವೆ. ಹೂಡಿಕೆಗಳಲ್ಲಿ ಜಿಂದಾಲ್ ಸಮೂಹವು ಇಂಧನ, ಸಿಮೆಂಟ್, ಉಕ್ಕು ಮತ್ತು ಪೂರಕ ಉದ್ಯಮಗಳಲ್ಲಿ 1.2 ಲಕ್ಷ ಕೋಟಿ ರೂ. ಹೂಡುತ್ತಿದೆ. ಬಲ್ದೋಟಾ ಸಮೂಹವು ಕೊಪ್ಪಳದಲ್ಲಿ 54 ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ಕೊಪ್ಪಳದಲ್ಲಿ ಉಕ್ಕು ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಲ್ಯಾಮ್ ರೀಸರ್ಚ್ ಕಂಪನಿ ತಯಾರಿಕೆ ಮತ್ತು ಸಂಶೋಧನೆಗೆ 10 ಸಾವಿರ ಕೋಟಿ ರೂ.ಗಳಷ್ಟು ಬೃಹತ್ ಬಂಡವಾಳ ತೊಡಗಿಸುತ್ತಿದೆ ಎಂದು ಮಾಹಿತಿ ನೀಡಿದರು.

ಉಳಿದಂತೆ, ಸ್ನೀಡರ್ ಎಲೆಕ್ಟ್ರಿಕ್ ಸಂಸ್ಥೆಯು ವಿದ್ಯುತ್ ಸಾಧನಗಳ ತಯಾರಿಕೆ ಮತ್ತು ಸಂಶೋಧನೆಗೆ 2,247 ಕೋಟಿ ರೂ, ವೋಲ್ವೊ ಕಂಪನಿಯು ವಿದ್ಯುಚ್ಚಾಲಿತ ಬಸ್/ಟ್ರಕ್ ತಯಾರಿಕೆಗೆ 1,400 ಕೋಟಿ ರೂ, ಹೋಂಡಾ ಕಂಪನಿಯು ಇ.ವಿ. ವಾಹನಗಳ ತಯಾರಿಕೆಗೆ 600 ಕೋಟಿ ರೂ. ಮತ್ತು ಸ್ಯಾಫ್ರಾನ್ ಕಂಪನಿಯು ಏವಿಯಾನಿಕ್ಸ್ ಉತ್ಪಾದನೆಗೆ 225 ಕೋಟಿ ರೂ. ಹೂಡುತ್ತಿವೆ. 2025-30ರವರೆಗಿನ ನೂತನ ಕೈಗಾರಿಕಾ ನೀತಿಯಡಿ ಒಟ್ಟಾರೆಯಾಗಿ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಇಟ್ಟುಕೊಳ್ಳಲಾಗಿದೆ ಎಂದು ವಿವರಿಸಿದರು.

ಹೊಸ ನೀತಿಯಡಿಯಲ್ಲಿ ತುಮಕೂರು ಮತ್ತು ವಿಜಯಪುರದಲ್ಲಿ ಕೈಗಾರಿಕಾ ಪಾರ್ಕ್, ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್ ಪಾರ್ಕ್, ಉಳಿದ ಭಾಗಗಳಲ್ಲಿ ಡೀಪ್-ಟೆಕ್ ಪಾರ್ಕ್ ಮತ್ತು ಸ್ವಿಫ್ಟ್ ಸಿಟಿ ಮುಂತಾದವು ಅಸ್ತಿತ್ವಕ್ಕೆ ಬರಲಿವೆ. ಡೀಪ್ ಟೆಕ್ ಮತ್ತು ಸ್ವಿಫ್ಟ್ ಸಿಟಿ ಯೋಜನೆಗಳು ತಲಾ 1 ಲಕ್ಷ ಕೋಟಿ ರೂ. ಹೂಡಿಕೆ ಸೆಳೆಯುವ ಮತ್ತು ತಲಾ 1 ಲಕ್ಷ ಉದ್ಯೋಗ ಸೃಷ್ಟಿಸುವಂತಹ ಧಾರಣಾಶಕ್ತಿ ಹೊಂದಿವೆ. ಕ್ವಿನ್ ಸಿಟಿ ಅಭಿವೃದ್ಧಿಗೆ ಸಂಬಂಧಿಸಿದಂತೆ 10 ವಿ.ವಿ.ಗಳೊಂದಿಗೆ ಒಡಂಬಡಿಕೆಗೆ ಅಂಕಿತ ಹಾಕಲಾಗಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

2 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

3 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

4 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

4 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

10 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

10 hours ago